ಎಸ್ಸೆಸ್ಸೆಲ್ಸಿ ಪರೀಕ್ಷೆ*: ಜಿಲ್ಲೆಗೆ

ಉತ್ತಮ ಫಲಿತಾಂಶ ನಿರೀಕ್ಷೆ:

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್

ಮಾರ್ಚ್‌ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಮೂಲಕ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಲು ಕ್ರಮ ವಹಿಸಬೇಕು ಎಂದು

ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯ ಪ್ರಾಂಶುಪಾಲರೂ ಆದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ( ಅಭಿವೃದ್ಧಿ ) ರಾಮಚಂದ್ರರಾಜೇ ಅರಸ್

ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ

ಎಸ್‌ಎಸ್‌ಎಲ್‌ಸಿ ರಾಜ್ಯಮಟ್ಟದ ಪೂರ್ವಸಿದ್ಧತಾ ಪರೀಕ್ಷೆ-3 ರ ಪರೀಕ್ಷಾ ಫಲಿತಾಂಶ ವಿಶ್ಲೇಷಣೆ ನಡೆಸಿ ಮಾ.18 ರಿಂದ ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಕುರಿತು

ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ

ಅವರು ಮಾತನಾಡಿದರು.

 

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಉತ್ತಮ

ಪಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಶೇಷ ಕಾಳಜಿ ವಹಿಸಿದ್ದು,

ಈ ಬಾರಿ ಕೊಡಗು ಜಿಲ್ಲೆಯ

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವು ರಾಜ್ಯಮಟ್ಟದಲ್ಲಿ ಮೊದಲ ಎರಡನೇ ಸ್ಥಾನಗಳಿಸುವ ಗುರಿ ಹೊಂದಲಾಗಿದೆ ಎಂದರು.

ಪ್ರಸಕ್ತ ವರ್ಷ, ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದ ಗುಣಮಟ್ಟವನ್ನು ಹೆಚ್ಚಿಸುವ ಗುರಿಯೊಂದಿಗೆ ಉತ್ತಮಸಿದ್ಧತೆ ನಡೆಸಿರುವುದು ಕಂಡುಬಂದಿದೆ.

ಎಸ್ಸೆಸ್ಸೆಲ್ಸಿ

ವಿದ್ಯಾರ್ಥಿಗಳ ಉತ್ತಮ ಕಲಿಕೆಗೆ ಪ್ರೌಢಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ಹೆಚ್ಚಿನ ಪರಿಶ್ರಮ ನಡೆಸಿರುವುದು ಶ್ಲಾಘನೀಯವಾದುದು ಎಂದರು.

 

 

ಎಸ್ಸೆಸ್ಸೆಲ್ಸಿ ಪರೀಕ್ಷೆ-1ನ್ನು ವ್ಯವಸ್ಥಿತ ರೀತಿಯಲ್ಲಿ ಹಾಗೂ ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಈ ಬಾರಿ ಜಿಲ್ಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಈ ನಿಟ್ಟಿನಲ್ಲಿ ಇಲಾಖೆಯು ಸಕಲ ತಯಾರಿ ಮಾಡಿಕೊಂಡಿದೆ ಎಂದು

ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್‌ ಹೇಳಿದರು.

ಮಕ್ಕಳಲ್ಲಿ ಪರೀಕ್ಷೆ ಬಗ್ಗೆ

ಧೈರ್ಯ ತುಂಬಿ ಪರೀಕ್ಷೆಯನ್ನು ಹಬ್ಬದ ಮಾದರಿಯಲ್ಲಿ ಸಂಭ್ರಮಿಸಲು ಶಿಕ್ಷಕರು ಪ್ರೇರೇಪಿಸಬೇಕು. ಈ ಬಗ್ಗೆ

ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಪರೀಕ್ಷೆಯನ್ನು ಸಂತಸ ಮತ್ತು ಖುಷಿಯಿಂದ

ಬೇಕು ಎಂದು ಅರಸ್‌ ಸಲಹೆ ನೀಡಿದರು.

 

ವಿದ್ಯಾರ್ಥಿಗಳಿಗೆ ನೆರವು: ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಧೈರ್ಯ ತುಂಬಿ, ಪರೀಕ್ಷಾ ಫಲಿತಾಂಶ ಸುಧಾರಿಸಲು ಕ್ರಮ ವಹಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳಲ್ಲಿ ಶಿಕ್ಷಕರು ವಿಶೇಷ ಕಾಳಜಿ ವಹಿಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಕ್ಕಳನ್ನು ಸಿದ್ದಗೊಳಿಸಿದ್ದು, ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದರು.

ಮಾ.18 ರಿಂದ ಆರಂಭಗೊಳ್ಳಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ- 1 ರಲ್ಲಿ ತಾಲ್ಲೂಕಿನಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2481

ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ತಾಲ್ಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಎಸ್.ಎಸ್.ಶಿವಕುಮಾರ್ , ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಕೈಗೊಂಡಿರುವ ಅಂಕಿ- ಅಂಶಗಳ ಮಾಹಿತಿ ನೀಡಿದರು.

ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಹ್ಯಾರಿ ಮೋರಸ್,

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗೀಯ ಉಪಾಧ್ಯಕ್ಷ ಪಿ.ನವೀನ್ ಕುಮಾರ್,

ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ.ಮಂಜುನಾಥ್,

ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷೆ ಇಂದಿರಾ, ಕಾರ್ಯದರ್ಶಿ ಸೋಮಯ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಯಶವಂತ್, ತಾಲ್ಲೂಕಿನ‌ ಎಲ್ಲಾ‌ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಇದ್ದರು.

Exit mobile version