ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಿ.ಸಿ ದಿನೇಶ್ ಅವಿರೋಧ ಆಯ್ಕೆ.

ಮಡಿಕೇರಿ.ಮಾ.14-ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಿ.ಸಿ .ದಿನೇಶ್ ಅವರು ಆಯ್ಕೆಯಾಗಿದ್ದಾರೆ.

 

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್. ಟಿ .ಅನಿಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಕುಶಾಲನಗರ ತಾಲೂಕು ಸಂಘದ ಉಪಾಧ್ಯಕ್ಷರಾದ ಬಿ ಸಿ ದಿನೇಶ್ ಅವರನ್ನು ಮಂಡಳಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮಡಿಕೇರಿಯ ಖಾಸಗಿ ಹೋಟೆಲ್ ಸಭಾನಗಮದಲ್ಲಿ ನಡೆದ ಸಭೆಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಕೊಡಗು ಪತ್ರಿಕಾ ಭವನದ ಸ್ಥಾಪಕ ಅಧ್ಯಕ್ಷರ ಹಾಗೂ ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರ ಟಿ.ಪಿ. ರಮೇಶ್, ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಿ.ವಿ. ರವಿ ಕುಮಾರ್, ಖಜಾಂಚಿ ಟಿ ಕೆ ಸಂತೋಷ್ ಹಾಗೂ ಸಂಘದ ಪದಾಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

Exit mobile version