
ಮಡಿಕೇರಿ: ಸುಂಟಿಕೊಪ್ಪ ಪೊಲೀಸ್
ಠಾಣೆ ವ್ಯಾಪ್ತಿಯ ಕೆಂಚಟ್ಟಿ ಬಳಿ ಸುಂಟಿಕೊಪ್ಪದಿಂದ ಮಾದಾಪುರಕ್ಕೆ ಬೈಕ್ತೆ ನಲ್ಲಿ ತೇರಳುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಾದಾಪುರ ಜಂಬೂರು ಬಾಣೆ ನಿವಾಸಿ 36 ವರ್ಷದ ಅನಿಲ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಸುಂಟಿಕೊಪ್ಪದಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು ಹಿಂಬದಿಯಲ್ಲಿ ಕುಳಿತಿದ್ದ ಹರೀಶ್ ಎಂಬಾತನಿಗೂ ಗಂಬೀರ ಗಾಯವಾಗಿದ್ದು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

