ಗೌಡ ಹಿತರಕ್ಷಣಾ ಸಮಿತಿಯಿಂದ ಸಾಧಕರಿಗೆ ಸನ್ಮಾನ

ಕೊಡಗಿನ ಎಲ್ಲ ಪಂಗಡಗಳ 110 ಐನ್ ಮನೆಗಳ ಅಭಿವೃದ್ಧಿಗಾಗಿ 4.50 ಕೋಟಿ ರು. ಮೀಸಲಿರಿಸಲಾಗಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಕೊಡಗು ಗೌಡ ಹಿತರಕ್ಷಣಾ ಸಮಿತಿ ವತಿಯಿಂದ ಇಲ್ಲಿನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಮತ್ತು ಸಮಾರಂಭ ಉದ್ಘಾಟಿಸಿ ಅಭಿನಂದನಾ ಮಾತನಾಡಿದರು.

ಕೊಡಗಿನಲ್ಲಿ ಕೊಡವರು, ಕೊಡವ ಭಾಷಿಕ ಮೂಲ ನಿವಾಸಿಗಳು, ಅರೆಭಾಷಿಕ ಗೌಡ ಜನಾಂಗ ಸೇರಿದಂತೆ ಹಲವು ಸಮುದಾಯದವರು ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿನ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನೂ ಉಳಿಸಿಕೊಳ್ಳಬೇಕು. ಹಿನ್ನೆಲೆಯಲ್ಲಿ ಕೊಡಗಿನ ಎಲ್ಲ ಪಂಗಡಗಳ 110 ಐನ್ ಮನೆಗಳ ಅಭಿವೃದ್ಧಿಗಾಗಿ 4.50 ಕೋಟಿ ರೂ. ಈ ಮೀಸಲಿರಿಸಲಾಗಿದೆ. ಅರೆಭಾಷಿಕ ಗೌಡ ಸಮಾಜದ ಸುಮಾರು 30 ಐನ್ ಮನೆಗಳೂ ಇದರಲ್ಲಿ ಸೇರಿವೆ.

ಕೊಡಗು ಗೌಡ ಸಮಾಜಕ್ಕೆ ಮಡಿಕೇರಿ ಸಮೀಪದಲ್ಲಿ 6 ಎಕರೆ ಜಾಗ ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ. ಇನ್ನೂ ಹೆಚ್ಚಿನ ಜಾಗ ಕೊಡಿಸಲು ಪ್ರಯತ್ನ ನಡೆಸಲಾಗುವುದು. ಭಾಗಮಂಡಲ ಗೌಡ ಸಮಾಜ ಕಟ್ಟಡಕ್ಕೆ 1 ಕೋಟಿ ರು. ಹಣ ಸರ್ಕಾರದಿಂದ ಮಂಜೂರಾಗಿದ್ದು, ಇನ್ನಷ್ಟೇ ಬಿಡುಗಡೆ ಆಗಬೇಕಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಎಲ್ಲರ ಅವಿರತ ಶ್ರಮದ ಫಲವಾಗಿ ಕೊಡಗು ಗೌಡ ಸಮಾಜಕ್ಕೆ ಸರ್ಕಾರದಿಂದ ಜಮೀನು ಸಿಕ್ಕಿದೆ. ಈ ಜಾಗ ಒಳ್ಳೆಯ ಕಾರ್ಯಕ್ಕೆ ಉಪಯೋಗವಾಗಲಿ ಎಂದರು.

ಕೊಡಗು ಗೌಡ ಹಿತರಕ್ಷಣ ಸಮಿತಿ ವತಿಯಿಂದ ಗೌಡ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಸನ್ಮಾನಿಸಿ ಗೌರವಿಸಿದರು.
ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರನ್ನು, ಕೊಡಗು ಗೌಡ ಹಿತರಕ್ಷಣ ಸಮಿತಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಕೊಡಗು ಗೌಡ ಹಿತರಕ್ಷಣ ಸಮಿತಿಯ ಅಧ್ಯಕ್ಷರು ಪರ್ಮಲೆ ಗಣೇಶ್, ಉಪಾಧ್ಯಕ್ಷರು ದಂಬೆಕೊಡಿ ಕವನ ಭೀಷ್ಮ,ರವಿಕುಮಾರ್,ಗೌರವ ಅಧ್ಯಕ್ಷರು ಪಿಎಲ್ ಸುರೇಶ್, ಪ್ರಧಾನ ಕಾರ್ಯದರ್ಶಿ ಪೂಜಾರಿರಾ ಪ್ರದೀಪ್ ಕುಮಾರ್, ಕಾರ್ಯದರ್ಶಿ ತುಳಸಿ ಗಾಂಧಿ ಪ್ರಸದ್ ಸಂಘದ ನಿರ್ದೇಶಕರು ಭಾಗವಹಿಸಿದ್ದರು.
Exit mobile version