🩸 ಮರಗೋಡಿನಲ್ಲಿ ಭಾರೀ ರಕ್ತದಾನ ಶಿಬಿರ

ಸಾರ್ವಜನಿಕರಿಂದ ಹೆಚ್ಚಿನ ಸ್ಪಂದನೆ ನಿರೀಕ್ಷೆ

ಮರಗೋಡು: ಆಟೋ ಚಾಲಕರ ಹಾಗೂ ಮಾಲೀಕರ ಸಂಘ ಮತ್ತು ಕೊಡಗು ಬ್ಲಡ್ ಡೋನರ್ಸ್ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 30 ರಂದು ಮರಗೋಡಿನಲ್ಲಿ ಭಾರೀ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಜಿಲ್ಲಾ ರಕ್ತ ನಿಧಿ ಕೇಂದ್ರ ಇವರ ಸಹಕಾರದೊಂದಿಗೆ ನಡೆಯುವ ಈ ಶಿಬಿರವು ವಿವೇಕಾನಂದ ಯುವಕ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಸಂಘಟನೆಗಳು ರಕ್ತದ ಕೊರತೆಯನ್ನು ನೀಗಿಸಲು ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಂಡಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 7760284500 ಹಾಗೂ 7624875662 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

 

✍🏻ಅಶೋಕ್_ಮಡಿಕೇರಿ

Exit mobile version