ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ.ಮಂತರ್ ಗೌಡ ರವರ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲ್ಲೂಕು ಕೆ.ಡಿ.ಪಿ.ಪ್ರಗತಿ ಪರಿಶೀಲನಾ ಸಭೆ

ಏಪ್ರಿಲ್ ಒಂದರಿಂದ ಆರಂಭವಾಗಿರುವ ಜನಗಣತಿಯಲ್ಲಿ ಕೊಡಗಿನ ಸರ್ವ ನಾಗರಿಕರು ಕಡ್ಡಾಯವಾಗಿ ಪಾಲ್ಗೊಂಡು ಮಾಹಿತಿ ನೀಡುವಂತೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕೋರಿದ್ದಾರೆ.
ಪರಿಶೀಲನಾ ಸಭೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.ಇದೇ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಕಾರ್ಯ ನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಆಡಳಿತಾಧಿಕಾರಿ ಅಬ್ದುಲ್ ನಭಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

