Close Menu
Kodagu News
    ಹೊಸ ಸುದ್ದಿ

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲಿಸಿ: ದಿನಕರ ಶೆಟ್ಟಿ
    ಜಿಲ್ಲೆ

    ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲಿಸಿ: ದಿನಕರ ಶೆಟ್ಟಿ

    ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲಿಸಿ: ದಿನಕರ ಶೆಟ್ಟಿ

    ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾದವು.

    ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಕುರಿತು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಪೊಲೀಸ್ ಉಪ ಅಧೀಕ್ಷಕರಾದ ದಿನಕರ ಶೆಟ್ಟಿ ಅವರು ದೂರು ಅರ್ಜಿ ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರಿಂದ ಸಲ್ಲಿಕೆಯಾದ 6 ಅರ್ಜಿಗಳಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು.

    ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸರ್ಕಾರಿ ನೌಕರರು ಸ್ಪಂದಿಸುವಂತಾಗಬೇಕು. ಆಗದಿರುವ ಕೆಲಸಕ್ಕೆ ಹಿಂಬರಹ ನೀಡುವಂತಾಗಬೇಕು ಎಂದು ನಿರ್ದೇಶನ ನೀಡಿದರು.

    ಸರ್ಕಾರಿ ಕೆಲಸ ಸಾರ್ವಜನಿಕರ ಕೆಲಸವಾಗಿದ್ದು, ಅದನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ದಿನಕರ ಶೆಟ್ಟಿ ಅವರು ಎಚ್ಚರಿಸಿದರು.

    ಸಾರ್ವಜನಿಕರಿಂದ ಸಲ್ಲಿಕೆಯಾಗುವ ಮನವಿಗಳಿಗೆ ಒಂದು ಅಥವಾ ಎರಡು ವರ್ಷವಾದರೂ ಬಗೆಹರಿಸಿಲ್ಲ. ಹೀಗೆ ಆದರೆ ಹೇಗೆ ಎಂದು ಪ್ರಶ್ನಿಸಿದರು.

    ಪ್ರತಿಯೊಬ್ಬ ಸರ್ಕಾರಿ ನೌಕರರು ಗುರುತಿನ ಚೀಟಿ ಇರಬೇಕು. ಚಲನವಲನ ವಹಿ ಬರೆಯಬೇಕು. ರಜೆ ಅಥವಾ ಕೇಂದ್ರ ಸ್ಥಾನದಿಂದ ಹೊರ ಹೋಗಿದ್ದಲ್ಲಿ ಸಂಬಂಧಪಟ್ಟ ಪತ್ರ ಇರಬೇಕು. ಅವರ ಪರವಾಗಿ ಬರುವವರಿಗೆ ಸಭೆಗೆ ನಿಯೋಜನೆ ಮಾಡಿರುವ ಬಗ್ಗೆ ಪತ್ರ ಇರಬೇಕು ಎಂದು ನಿರ್ದೇಶನ ನೀಡಿದರು.

    ಕೆಲಸ ಆಗದಿದ್ದಲ್ಲಿ 15 ದಿನದ ನಂತರ ದೂರವಾಣಿ ಮೂಲಕ ಮಾಹಿತಿ ನೀಡುವಂತೆ ದೂರು ಸಲ್ಲಿಸಿದವರಿಗೆ ಲೋಕಾಯುಕ್ತ ಉಪ ಅಧೀಕ್ಷಕರು ಸಲಹೆ ಮಾಡಿದರು. ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ವೀಣಾ, ತಹಶೀಲ್ದಾರ್ ಶ್ರೀಧರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

    Previous Articleಸಂಸದರಿಂದ ಪಾಸ್ಪೋರ್ಟ್ ಮೇಳಕ್ಕೆ ಚಾಲನೆ
    Next Article ಶಾಸಕ ಡಾ ಮಂತರ್ ಗೌಡ ರವರಿಗೆ ಕೋರಿಕೆ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು

    Related Posts

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.