ವಿರಾಜಪೇಟೆ ತಾಲೂಕು ಸಿದ್ದಾಪುರ ಗ್ರಾಮದಲ್ಲಿ ಆಯೋಜನೆಗೊಂಡ, ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದ್ದರು.
ಸಿದ್ದಾಪುರ ಪ್ರೌಢಶಾಲಾ ಮೈದಾನದಲ್ಲಿ ಕ್ರಿಶ್ಚಿಯನ್ ಬಾಂಧವರು ಆಯೋಜಿಸಿದ ಕ್ರಿಕೆಟ್ ಪಂದ್ಯಾಟಕ್ಕೆ ಶುಭ ಕೋರಿ ಮಾತನಾಡಿದ ಮಾನ್ಯ ಶಾಸಕರು, ಎಲ್ಲರನ್ನೂ ಒಂದುಗೂಡಿಸುವ ಕ್ರೀಡೆ ಯಶಸ್ಸು ಕಾಣಲಿ ಎಂದು ಹಾರೈಸಿದರು. ಪ್ರೇಕ್ಷಕರ ಹಾಗೂ ಆಯೋಜಕರ ಕೋರಿಕೆ ಮೇರೆಗೆ ಮಾನ್ಯ ಶಾಸಕರು ಸ್ವತಃ ಬ್ಯಾಟ್ ಮಾಡುವ ಮೂಲಕ ಎಲ್ಲರನ್ನು ಮನರಂಜಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಪಿ ವಿ ಜಾನ್ಸನ್, ಜಿಮ್ಮಿ, ಪಕ್ಷದ ಮುಖಂಡರು ಚೆಕ್ಕು, ಆಪ್ರು ರವೀಂದ್ರ, ಅನಿಲ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.


