ಶಾಸಕ ಪೊನ್ನಣ್ಣ ಉಪಸ್ಥಿತಿಯಲ್ಲಿ ವಿರಾಜಪೇಟೆ ಸರಕಾರಿ ಕಾಲೇಜಿನ

ಅಭಿವೃದ್ಧಿ ಸಮಿತಿ ಸಭೆ

ಸರಕಾರಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಸಿಡಿಸಿಯ ಅಧ್ಯಕ್ಷರೂ ಆಗಿರುವ ಮಾನ್ಯ ಶಾಸಕರು, ನಿಯಮಿತವಾಗಿ ನಡೆಯುವ ಈ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ವಿವಿಧ ಕ್ರಮಗಳು ಹಾಗೂ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರು ಮದಂಡ ತಿಮ್ಮಯ್ಯ, ಸದಸ್ಯರು ನಾಸಿರ್ ಹಾಗೂ ಸಿಡಿಸಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Exit mobile version