Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಪದವಿ ಪ್ರದಾನ ಸಮಾರಂಭ
    ಜಿಲ್ಲೆ

    ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಪದವಿ ಪ್ರದಾನ ಸಮಾರಂಭ

    ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಪದವಿ ಪ್ರದಾನ ಸಮಾರಂಭ

    ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ ಐದನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭವು ಕಾಲೇಜು ಆವರಣದಲ್ಲಿ ನಡೆಯಿತು.

     

    ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ ರಾಜ್‌ ನಾರಯಣ್‌ ತಿವಾರಿ ನಿರ್ದೇಶಕರು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) – ಪರಿಸರ ಆರೋಗ್ಯ ಸಂಶೋಧನಾ ರಾಷ್ಟ್ರೀಯ ಸಂಸ್ಥೆ ಭೂಪಾಲ್‌ ರವರು ವೈದ್ಯಕೀಯ ಪದವೀಧರರಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಯೋಜಕರಿಗೆ ಧನ್ಯವಾದಗಳನ್ನು ತಿಳಿಸಿದರು.

     

    ವೈದ್ಯಕೀಯ ವೃತ್ತಿ ಕೇವಲ ಚಿಕಿತ್ಸೆ ನೀಡುವುದಲ್ಲದೆ, ಸಮಾಜದತ್ತ ಹೆಚ್ಚಿನ ಜವಾಬ್ದಾರಿಯನ್ನು ಹೊಂದಿದೆ ಎಂದು ಅವರು ಹೇಳಿದರು. ರೋಗಿಗಳೊಂದಿಗೆ ಸಹಾನುಭೂತಿ ಮತ್ತು ಮಾನವೀಯತೆ ವೈದ್ಯರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ ಎಂದರು. ಜನರು ವೈದ್ಯರನ್ನು ಕೇವಲ ಆರೋಗ್ಯ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ, ವಿಶ್ವಾಸದ ಆಧಾರದ ಮೇಲೆ ಸಂಪರ್ಕಿಸುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.

     

    ಪಿಜಿ ಅಧ್ಯಯನದಲ್ಲಿ ಸಮುದಾಯ ವೈದ್ಯಕೀಯದ ಮಹತ್ವವನ್ನು ಒತ್ತಿಹೇಳಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. Evidence Based Medicine ಇಂದಿನ ಕಾಲದಲ್ಲಿ ಅತ್ಯಂತ ಅಗತ್ಯವಾಗಿದ್ದು, ದೇಶದಲ್ಲಿ ಸಂಶೋಧನೆಗೆ ಇನ್ನಷ್ಟು ಅವಕಾಶಗಳಿವೆ ಎಂದರು.

     

    ಭಾರತವು 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ವೈದ್ಯರ ಪಾತ್ರ ಮಹತ್ತರವಾಗಿದೆ. ದೇಶದ ಆರೋಗ್ಯವನ್ನು ಕಾಪಾಡುವ ಹೊಣೆಗಾರಿಕೆ ಯುವ ವೈದ್ಯರ ಮೇಲಿದೆ ಎಂದು ತಿಳಿಸಿದರು.

     

    ಇದೇ ವೇಳೆ ವೈದ್ಯರು ತಮ್ಮ ಸ್ವಂತ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದರ ಜೊತೆಗೆ, ಪರಿಸರ ಸಂರಕ್ಷಣೆಯ ದೂತರಾಗಬೇಕು ಎಂದರು. ಜಾಗತಿಕ ತಾಪಮಾನ ಏರಿಕೆ ಮತ್ತು ಪರಿಸರ ಹಾನಿ ಆರೋಗ್ಯ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, sustainable practices ಅನುಸರಿಸುವ ಅಗತ್ಯವಿದೆ ಎಂದು ಹೇಳಿದರು.

    ಅತಿಥಿಗಳಾಗಿ ಆಗಮಿಸಿದ ಕೊಡಗು ಜಿಲ್ಲಾ ಗ್ಯಾರಂಟಿ ಅಧ್ಯಕ್ಷರಾದ ಟಿ.ಎಂ ಧರ್ಮಜ ಉತ್ತಪ್ಪನವರು ಮಾತನಾಡಿ ಕೊಡಗಿನ ರಮನೀಯ ಸ್ಥಳದಲ್ಲಿ ಎಂಬಿಬಿಎಸ್‌ ವ್ಯಾಸಂಗವನ್ನು ಪೂರ್ಣಗೊಳಿಸಿ ತೆರಳುತ್ತಿರುವ ನಿಮಗೆಲ್ಲರೀಗೂ ಕಾವೇರಿ ಮಾತೆ ಉತ್ತಮ ಭವಿಷ್ಯವನ್ನು ರೂಪಿಸಲು ಆರ್ಶಿವಾದ ಮಾಡಲಿ ಎಂದು ಹಾರೈಸುತ್ತಾ ದೇವರು ಮತ್ತು ತಂದೆ-ತಾಯಿಯ ನಂತರ ಸಮಾಜದಲ್ಲಿ ಅತ್ಯಂತ ಗೌರವಿಸಲ್ಪಡುವವರು ವೈದ್ಯರು ಎಂದು ಹೇಳಿದರು. ವೈದ್ಯರ ಸೇವೆಯೇ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ವೈದ್ಯ ವೃತ್ತಿಗೆ ಶ್ರೇಷ್ಟವಾದ ಗೌರವವಿದ್ದು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ನಿಮಗೆ ಅಪರವಾದ ಅನುಭವ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಒತ್ತಡಕ್ಕೆ ಮಣಿಯದೆ ನಿಮ್ಮ ವೃತ್ತಿಯನ್ನು ಗೌರವಿಸಿ ಕರ್ವ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.

     

    ಈ ಸಂಧರ್ಬದಲ್ಲಿ ಡಾ ಜಯರಾಮ್‌ ಮಂಡ್ಯ ಜಿಲ್ಲೆ ರವರು ಕಳೆದ 25 ವರ್ಷಗಳಿಂದ ವೈದ್ಯಕೀಯ ಕಾಲೇಜುಗಳಿಗೆ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು ತಮ್ಮ ಪತ್ನಿಯು ಕೊಡಗಿನವರಾಗಿದ್ದು ಅವರ ಜ್ಞಾಪಕರ್ತವಾಗಿ ಅವರ ಹೆಸರಿನಲ್ಲಿ ರೂ 2,50,000/- ರೂಪಾಯಿ ಠೇವಣಿಯನ್ನು ಕಾಲೇಜಿನಲ್ಲಿ ಇರಿಸಿದ್ದು ಬಡ್ಡಿ ಮೊತ್ತದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗದ ಸ್ನಾತಕೋತ್ತರ ವಿಬಾಗದಲ್ಲಿ ಪ್ರಥಮ ಅಂಕ ಪಡೆದವರಿಗೆ ರೂ 10,000 ರೂಪಾಯಿಗಳನ್ನು ವಿತರಿಸಿ ಗೌರವಿಸಲಾಯಿತು.

    ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ರವರಾದ ಡಾ. ಲೋಕೇಶ್ ಎ.ಜೆ ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಗಳಾದ ರೋಹಿಣಿ ಕೆ.ಎಂ, ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ರಾದ ಡಾ. ನಂಜುಂಡಯ್ಯ, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ರವಿಕಿರಣ್ ಕಿಸಾನ್, ಸಂಸ್ಥೆಯ ವಿಭಾಗದ ಮುಖ್ಯಸ್ಥರುಗಳು ಬೋಧಕ ವರ್ಗದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಸಂಸ್ಥೆಯಲ್ಲಿ ಈ ಬಾರಿ 150 ವೈದ್ಯ ವಿದ್ಯಾರ್ಥಿಗಳ ವೈದ್ಯರಾಗಿ ಹೊರಹೊಮ್ಮಿ ಪದವಿ ಸ್ವೀಕರಿಸಿದರು.

    Previous Articleಚೆಯ್ಯಂಡಾಣೆ ಮುಖ್ಯ ರಸ್ತೆ ಬದಿಯ ಗದ್ದೆಯಲ್ಲೇ ಪ್ರತ್ಯಕ್ಷವಾದ ಕಾಡಾನೆ ಹಿಂಡು -ಕಾಡಿಗಟ್ಟಿದ ಅರಣ್ಯ ಇಲಾಖೆ
    Next Article ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಜಿಸಿಸಿ ವಾರ್ಷಿಕ ಮಹಾಸಭೆ –ನೂತನ ಪದಾಧಿಕಾರಿಗಳ ಆಯ್ಕೆ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.