Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬೆಂಬಲಿಗರಿಗೆ ಔತಣಕೂಟವೋ? ಇಲ್ಲ ಬಲಪ್ರದರ್ಶನವೋ?
    ಜಿಲ್ಲೆ

    ಬೆಂಬಲಿಗರಿಗೆ ಔತಣಕೂಟವೋ? ಇಲ್ಲ ಬಲಪ್ರದರ್ಶನವೋ?

    Updated:May 15, 2026

    ಬೆಂಬಲಿಗರಿಗೆ ಔತಣಕೂಟವೋ? ಇಲ್ಲ ಬಲಪ್ರದರ್ಶನವೋ?

    ಮುತ್ತಪ್ಪ, ಮುದ್ದಪ್ಪ ಸಹೋದರರಿಂದ ಕಾರ್ಯಕರ್ತರಿಗೆ ಔತಣಕೂಟ ಆಯೋಜನೆ

    ಕುಶಾಲನಗರ: ಕುಶಾಲನಗರ ಕೂಡಿಗೆಯಲ್ಲಿ ಮೇ 12 ರಂದು ನಡೆದ ಮುತ್ತಪ್ಪ ಹಾಗೂ ಮುದ್ದಪ್ಪ ಅಭಿಮಾನೋತ್ಸವ ಔತಣಕೂಟ ಹಲವು ಆಯಾಮಗಳಲ್ಲಿ ಚರ್ಚೆಗೊಳಪಟ್ಟಿದೆ. ಚುನಾವಣೆಯ ಬಳಿಕ ತಮ್ಮ ಬೆಂಬಲಿಗರಿಗಾಗಿ ನಾಪಂಡ ಸಹೋದರರು ಔತಣಕೂಟ ಆಯೋಜಿಸಿದ್ದರು. 4 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬೆಂಬಲಿಗರು ಸಹೋದರರಿಗೆ ಅಭಿನಂದನೆ ಸಲ್ಲಿಸುವ ಮೂಲಕ ನಾವಿದ್ದೇವೆ ನಿಮ್ಮೊಂದಿಗೆ ಎಂಬ ಸಂದೇಶವನ್ನು ರವಾನಿಸುವಂತಿತ್ತು. ಇದೆಲ್ಲದರ ಮದ್ಯೆ ನಾಪಂಡ ಮುತ್ತಪ್ಪ ಅವರಿಗೆ ಸರಿಯಾದ ಸ್ಥಾನಮಾನ ನೀಡದೆ ಇರುವುದಕ್ಕೆ ಈ ಬೆಂಬಲಿಗರ ಸಭೆ ಎಂಬ ಬಲವಾದ ಮಾತುಗಳು ಕೇಳಿ ಬಂದಿವೆ. ಕಳೆದ ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿರುವ ನಾಪಂಡ ಮುತ್ತಪ್ಪ ಅವರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆಯೇ ಎಂಬ ಅಸಮಾಧಾನ ಕೂಡ ಈಗ ಮುತ್ತಪ್ಪ ಬೆಂಬಲಿಗರಿಂದ ವ್ಯಕ್ತವಾಗಿದೆ.

    30 ವರ್ಷಗಳಿಂದ ತನ್ನದೇ ತಂಡ ಕಟ್ಟಿದ್ದ ನಾಪಂಡ ಸಹೋದರರು.

    ಕಳೆದ 30 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಾಪಂಡ ಸಹೋದರರು ಅದರಲ್ಲೂ ನಾಪಂಡ ಮುತ್ತಪ್ಪ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು ಅಲ್ಲದೆ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದಲ್ಲಿ ತನ್ನ ಸ್ವಂತ ಬೆಂಬಲಿಗರ ತಂಡವನ್ನು ಕಟ್ಟಿಕೊಂಡು ಶಾಸಕ ಅಭ್ಯರ್ಥಿ ಸ್ಥಾನ ಪ್ರಮುಖ ಆಕಾಂಕ್ಷಿಯೂ ಆಗಿದ್ದರು. 2018 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿದ ಪ್ರಬಲ ಆಕಾಂಕ್ಷಿಯಾಗಿದ್ದರೂ ಕೂಡ ಮುತ್ತಪ್ಪ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಟಿಕೆಟ್ ನೀಡದ ಕಾಂಗ್ರೆಸ್ ಪಕ್ಷದ ವಿರುದ್ಧ ತೊಡೆತಟ್ಟಿ ನಿಂತಿದ್ದ ಮುತ್ತಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸೂಚನೆ ನೀಡಿದ್ದೂ ಅಲ್ಲದೆ ತಮ್ಮ ಸಾವಿರಾರು ಬೆಂಬಲಿಗರ ಜೊತೆ ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದರು.

    ಜಿಲ್ಲಾಧ್ಯಕ್ಷ ಸ್ಥಾನ ಕೊಡುತ್ತೇವೆ ಎಂದಿದ್ದ ಹೈಕಮಾಂಡ್

    2018 ಚುನಾವಣೆಯ ಸಂದರ್ಭ ರೆಬೆಲ್ ಆಗಿದ್ದ ಮುತ್ತಪ್ಪ ಅವರನ್ನು ಚುನಾವಣೆಯ ಬಳಿಕ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡುವ ಭರವಸೆಯನ್ನು ನೀಡಲಾಗಿತ್ತು. ಆದರೆ ಬಿ ಫಾರ್ಮ್ ಪಡೆದುಕೊಂಡಿದ್ದ ಹೈಕೋರ್ಟ್ ಹಿರಿಯ ವಕೀಲ ಚಂದ್ರಮೌಳಿಗೆ ಕಾರಂತರಗಳಿಂದ ಟಿಕೆಟ್ ಕೈತಪ್ಪಿದ ಕಾರಣ ನಾಪಂಡ ಮುತ್ತಪ್ಪ ಅವರಿಗೆ ಟಿಕೆಟ್ ನೀಡುವ ಭರವಸೆ ನೀಡಲಾಯಿತಾದರೂ ಕೊನೆ ಕ್ಷಣದಲ್ಲಿ ಟಿಕೆಟ್ ಕೆ ಪಿ ಚಂದ್ರಕಲಾ ಪಾಲಾಯಿತು.

    ಪಕ್ಷದಲ್ಲಿ ಗೌರವಯುತ ಸ್ಥಾನ ನೀಡಲು ಮೀನಾ ಮೇಷ

    ಜಿಲ್ಲಾಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ ಪಕ್ಷದ ಮುಖಂಡರು ಚುನಾವಣೆಯ ಸೋಲಿನ ಬಳಿಕ ಮುತ್ತಪ್ಪ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಮೀನಮೇಷ ಎಣಿಸುಸುವಂತಾಯಿತು. ಚುನಾವಣೆ ಬಳಿಕದ ಸತತ ಮೂರು ವರ್ಷ ಹಲವಾರು ಬಾರಿ ಪಕ್ಷದ ನಾಯಕರಲ್ಲಿ ಉನ್ನತ ಹುದ್ದೆ ಕೇಳಿದರರೂ ಕೊಡಲೊಪ್ಪದ ಕಾಂಗ್ರೆಸ್ ಪಕ್ಷವನ್ನು ಕೊನೆಗೂ ಮುತ್ತಪ್ಪ ಹಾಗು ಮುದ್ದಪ್ಪ ಸಹೋದರರು ತ್ಯಜಿಸಿ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷ ಸೇರಿದ್ದರು.

    ಚುನಾವಣೆ ಬಳಿಕ ಮತ್ತೆ ಮಾತೃಪಕ್ಷಕ್ಕೆ

    2023 ರ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡರ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಮಾತೃ ಪಕ್ಷ ಸೇರಿದ್ದ ನಾಪಂಡ ಮುತ್ತಪ್ಪ ರಾಜಕೀಯವಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ನಿರಂತರ ಪ್ರಯತ್ನಿಸಿದ್ದಾರೆ. ಸದ್ಯ ತಮ್ಮ ಬೆಂಬಲಿಗರ ಸಭೆ ಕರೆದಿರುವ ಅವರು ಮುಂಬರುವ ಚುನಾವಣೆಗಳಲ್ಲಿ ಪಕ್ಷ ಪ್ರಾಮುಖ್ಯತೆ ನೀಡದೆ ಹೋದಲ್ಲಿ ಮುಂದೆ ಏನು ಮಾಡಬೇಕೆಂಬ ಅಚಲ ನಿರ್ಧಾರ ತೆಗೆದುಕೊಳ್ಳುವ ಸಾದ್ಯತೆಯೂ ಇದೆ.

    ಬಿಜೆಪಿ ವಿರುದ್ಧ ದ್ವನಿ ಎತ್ತಿದ್ದ ಏಕೈಕ ವ್ಯಕ್ತಿ

    2014 ರ ಲೋಕಸಭೆ ಚುನಾವಣೆಯ ನಂತರ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತಲು ಕಾಂಗ್ರೆಸ್ ಕಾರ್ಯಕರ್ತರು ಭಯಪಡುತ್ತಿದ್ದ ಕಾಲವದು. ಆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವನ್ನು ಟೀಕಿಸುವ ಕೆಲಸವನ್ನು ಸಮಾಜಿಕ ಜಾಲತಾಣಗಳ ಮೂಲಕ ಮುತ್ತಪ್ಪ ಹಾಗೂ ಮುದ್ದಪ್ಪ ಮಾಡಿದ್ದಂತೂ ಸತ್ಯ. ಎಡಪಂಥೀಯ ಮನಸ್ಥಿತಿ ಹಾಗೂ ಬಿಜೆಪಿಗರನ್ನು ಧೈರ್ಯವಾಗಿ ಪ್ರಶ್ನಿಸುವ ಮುತ್ತಪ್ಪ ಮುದ್ದಪ್ಪ ಸಹೋದರನ್ನು ಕಾಂಗ್ರೆಸ್ ಪಕ್ಷ ಯಾಕೆ ಇನ್ನು ಗುರುತಿಸಿಲ್ಲ ಅನ್ನುವುದು ಸಾವಿರಾರು ಮುತ್ತಪ್ಪ ಮುದ್ದಪ್ಪ ಅಭಿಮಾನಿಗಳ ಯಕ್ಷ ಪ್ರಶ್ನೆಯಾಗಿದೆ.

    ಎಮ್ಮೆಲ್ಸಿ ಮೇಲಿದೆಯೇ ಮುತ್ತಪ್ಪ ಕಣ್ಣು

    ಈ ಬೆಳವಣಿಗೆಯ ಮದ್ಯೆ 2027 ರಲ್ಲಿ ಬರುವ ವಿಧಾನ ಪರಿಷತ್ ಚುನಾವಣೆಗೆ ಮುತ್ತಪ್ಪ ಕಾಂಗ್ರೆಸ್ ಪಕ್ಷದ ಪ್ರಬಲ ಏಕೈಕ ಆಕಾಂಕ್ಷಿ ಎಂಬ ಮಾತುಗಳು ಕೇಳಿಬರುತ್ತಿದ್ದು ಈ ಬೆಳವಣಿಗೆಗಳು ಇದಕ್ಕೆ ಪುಷ್ಟಿಕೊಡುವಂತಿದೆ. ಎಮ್ಮೆಲ್ಸಿ ಚುನಾವಣೆಯನ್ನೇ ಗುರಿಯಾಗಿಸಿಕೊಂಡು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅವರ ಆಪ್ತ ವಲಯ ಹೇಳಿಕೊಳ್ಳುತ್ತಿದ್ದು , ಬೆಂಬಲಿಗರ ಔತಣ ಕೂಟವನ್ನು ಯಾವ ದೃಷ್ಟಿಕೋನದಲ್ಲಿ ನೋಡಲಿದೆ ಎಂಬುವುದು ಕೂಡ ಕೂತೂಹಲ ಮೂಡಿಸಿದೆ.

    Previous Articleನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    Next Article ರಸ್ತೆ ಅಭಿವೃದ್ಧಿಗೆ ಶಾಸಕ ಡಾ ಮಂತರ್ ಗೌಡ ರವರಿಂದ 35 ಲಕ್ಷ ರೂಗಳ ಅನುದಾನ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.