Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಸಚಿವ ಎನ್.ಎಸ್. ಬೋಸರಾಜು
    ಜಿಲ್ಲೆ

    ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಸಚಿವ ಎನ್.ಎಸ್. ಬೋಸರಾಜು

    ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಸಚಿವ ಎನ್.ಎಸ್. ಬೋಸರಾಜು

    – ಕಾಳಗದಲ್ಲಿ ಗಾಯಗೊಂಡು ಮೃತಪಟ್ಟ ‘ಮಾರ್ತಾಂಡ’ ಆನೆಯ ಸಾವಿಗೆ ಸಚಿವರ ಕಂಬನಿ

    – ಸಂತ್ರಸ್ತ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ತಕ್ಷಣವೇ ₹20 ಲಕ್ಷ ಪರಿಹಾರ

    ಬೆಂಗಳೂರು, ಮೇ 19: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಬಾರೆ ಶಿಬಿರದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಸೂಚನೆ ನೀಡಿದ್ದಾರೆ.

     

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

    “ಈ ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ. ಘಟನೆಗೆ ನಿಖರ ಕಾರಣಗಳೇನು ಮತ್ತು ಪ್ರವಾಸಿ ಮಾರ್ಗಸೂಚಿ ನಿರ್ವಹಣೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,” ಎಂದು ಸಚಿವರು ತಿಳಿಸಿದ್ದಾರೆ.

    ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಆನೆ ಶಿಬಿರಗಳಲ್ಲಿ ಕಟ್ಟುನಿಟ್ಟಾಗಿ ಪ್ರವಾಸಿಗರ ನಿರ್ವಹಣೆಗೆ ಮಾರ್ಗಸೂಚಿ ಜಾರಿಗೆ ತರಲು ಸಚಿವರು ನಿರ್ದೇಶಿಸಿದ್ದಾರೆ. “ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸುವಂತೆ ನಿಗಾವಹಿಸಬೇಕು. ಜಿಲ್ಲಾಡಳಿತವು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಕಾಡುಪ್ರಾಣಿಗಳ ನಡವಳಿಕೆಯನ್ನು ಹಾಗೂ ಅವುಗಳ ಪ್ರತಿಕ್ರಿಯೆಯನ್ನು ನಿಖರವಾಗಿ ಊಹಿಸಲು ಯಾರಿಗೂ ಸಾಧ್ಯವಿಲ್ಲ. ಆದ್ದರಿಂದ ಅರಣ್ಯ ಪ್ರದೇಶಗಳು ಹಾಗೂ ಆನೆ ಶಿಬಿರಗಳಿಗೆ ಭೇಟಿ ನೀಡುವ ಪ್ರವಾಸಿಗರು ಅರಣ್ಯ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಾಣಿಗಳನ್ನು ವೀಕ್ಷಿಸುವಾಗ ಅಂತರ ಕಾಯ್ದುಕೊಳ್ಳುವ ಜೊತೆಗೆ ತಮ್ಮ ಸುರಕ್ಷತೆಯ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ಪ್ರವಾಸಿಗರಲ್ಲಿ ಕಾಳಜಿಯ ಮನವಿ ಮಾಡಿದ್ದಾರೆ.

    ಇದೇ ವೇಳೆ, ಸೋಮವಾರ ದುಬಾರೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ‘ಮಾರ್ತಾಂಡ’ ಆನೆಯು ಮಂಗಳವಾರ ಬೆಳಗ್ಗೆ ಮೃತಪಟ್ಟಿರುವ ಸುದ್ದಿ ತಿಳಿದು ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾರ್ತಾಂಡನ ಅಗಲಿಕೆ ಶಿಬಿರದ ಸಿಬ್ಬಂದಿ ಹಾಗೂ ಪ್ರಾಣಿ ಪ್ರಿಯರಿಗೆ ನೋವು ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

    Previous Articleರಿವರ್ ರ್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ರಿವರ್ ರ್ಯಾಫ್ಟ್ ಫಿಟ್‍ನೆಸ್ ಪ್ರಮಾಣ ಪತ್ರ ಪಡೆದೇ ನಿರ್ವಹಣೆಗೆ ಎಡಿಸಿ ಸೂಚನೆ
    Next Article ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಶಾಸಕ ಡಾ. ಮಂತರ್ ಗೌಡ ಅಭಿಮತ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.