Close Menu
Kodagu News
    ಹೊಸ ಸುದ್ದಿ

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    • ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
    • ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ
    • ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ
    • ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ
    • ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    • ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    • ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಅಡುಗೆ ಮನೆ»ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ
    ಅಡುಗೆ ಮನೆ

    ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ

    ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ 6 ನೇ ವರ್ಷದ ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಾವು ಸವಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಮಡಿಕೇರಿ ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷರಾದ ಮಲ್ಲಂಡ ಮಧು ದೇವಯ್ಯ, ನಿರ್ದೇಶಕರಾದ ನಾಗೇಶ್ ಕುಂದಲ್ಪಾಡಿ, ಎಸ್.ಪಿ.ಪೊನ್ನಪ್ಪ, ಬೇಬಿ ಪೂವಯ್ಯ, ಚಟ್ರಂಡ ಲೀಲಾ ಮೇದಪ್ಪ, ಕೆ.ಎಂ.ಮನೋಹರ್, ಸುವಿನ್ ಗಣಪತಿ, ಮನು ಮಹೇಶ್, ಪೂವಪ್ಪ ನಾಯ್ಕ, ಉಮೇಶ್ ರಾಜಾ ಅರಸ್, ಸುದೀರ್, ಕಾಂಗೀರ ಸತೀಶ್, ಬಿ.ಎ.ಹರೀಶ್, ನಗರಸಭಾ ಸದಸ್ಯರಾದ ಸತೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ, ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಮುತ್ತಪ್ಪ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇಷ್ಮ, ಇತರರು ಇದ್ದರು.

    ಮಾವು ಮೇಳಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ವಿವಿಧ ಮಾವಿನ ಹಣ್ಣು ಮಹತ್ವ ಕುರಿತು ಮಾಹಿತಿ ಪಡೆದ ಶಾಸಕರು ಬಾದಾಮಿ, ಇಮಾಮ್ ಪಸಂದ್, ಆಲ್ಫೊನ್ಸೋ, ಕೇಸರ್, ದಶೇರಿ, ಮಲ್ಲಿಕಾ, ಮಾಲ್ಗೋವಾ, ಸಿಂಧೂರ, ರಸಪುರಿ, ತೋತಪುರಿ, ಕಾಲಾಪಾಡಿ, ಸಕ್ಕರೆಗುತ್ತಿ, ರುಮಾನಿ, ಮಿಠಾಯಿ ಮಾವು, ಉಪ್ಪಿನಕಾಯಿ ಮಾವು ಹೀಗೆ ಹಲವು ರೀತಿಯ ಮಾವುಗಳ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

    ಹಾಗೆಯೇ ವಿವಿಧ ರೀತಿಯ ಹಲಸು, ಮಾವು, ಮಂಗೋಸ್ಟಿನ್, ರಾಂಭೂಟಾನ್, ಮತ್ತಿತರ ಹಣ್ಣಿನ ಗಿಡಗಳ ಬಗ್ಗೆಯೂ ಮಾಹಿತಿ ಪಡೆದರು. ಹಣ್ಣು ಮತ್ತು ಹೂವಿನ ಗಿಡಗಳ ಬೀಜಗಳನ್ನು ವೀಕ್ಷಿಸಿದರು.

    ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರು ಸುಮಾರು 20 ಮಾವಿನ ಮಳಿಗೆ ಹಾಗೂ ಎರಡು ಹಲಸು ಮಳಿಗೆ ಹಾಗೆಯೇ ವಿವಿಧ ರೀತಿಯ ಹಣ್ಣಿನ, ತರಕಾರಿ ಮತ್ತು ಹೂವಿನ ಗಿಡಗಳ ಬೀಜ ಮಳಿಗೆಗಳು ಮಾವು ಮತ್ತು ಹಲಸು ಮೇಳದಲ್ಲಿ ಆಕರ್ಷಣೀಯವಾಗಿದ್ದವು. ನೈಸರ್ಗಿಕವಾಗಿ ಕೃಷಿಕರೇ ತಮ್ಮ ತೋಟದಲ್ಲಿ ಬೆಳೆದು ಗ್ರಾಹಕರಿಗೆ ಮಾರಾಟ ಮಾಡುವುದು ವಿಶೇಷವೇ ಸರಿ ಎಂದರು.

    ಹಣ್ಣುಗಳ ರಾಜ ಮಾವು ಎಂದರೆ ಪ್ರತಿಯೊಬ್ಬರ ಬಾಯಲ್ಲೂ ನೀರು ಬರುತ್ತದೆ. ಹಾಗಾಗಿ ಹಿಂದೆ ಚಿಕ್ಕ ಮಕ್ಕಳಿದ್ದ ಸಂದರ್ಭದಲ್ಲಿ ಮಾವಿನ ಹಣ್ಣನ್ನು ಹೆಚ್ಚು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇವು ಎಂದು ಶಾಸಕರು ಸ್ಮರಿಸಿದರು.

    ಕೊಡಗು ಜಿಲ್ಲೆಯಲ್ಲಿ ಬಹು ಬೆಳೆ ಬೆಳೆಯಲಾಗುತ್ತದೆ. ಕೊಡಗು ಜಿಲ್ಲೆಯಲ್ಲಿ ಕಾಫಿ, ಏಲಕ್ಕಿ, ಕರಿಮೆಣಸು ಹಾಗೆಯೇ ಕಾಡು ಮಾವು, ಇತ್ತೀಚೆಗೆ ಅಡಿಕೆ, ಬಟರ್ ಫ್ರೂಟ್ ಬೆಳೆ ಬೆಳೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಪರ್ಯಾಯ ಬೆಳೆಯತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

    ಮಾದಾಪುರದಲ್ಲಿ ತೋಟಗಾರಿಕೆ ಇಲಾಖೆ ವ್ಯಾಪ್ತಿಯ 100 ಎಕರೆ ಜಾಗವಿದ್ದು, ಗುತ್ತಿಗೆ ಆಧಾರದಲ್ಲಿ ಕೃಷಿಕರಿಗೆ ಜಮೀನು ನೀಡಿದರೆ ಹೆಚ್ಚಿನ ಆದಾಯ ಬರಲಿದೆ ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.

    ಮಾವು ಮತ್ತು ಹಲಸು ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾವು ಬೆಳೆಗಾರರಿಂದ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಡಾ.ಮಂತರ್ ಗೌಡ ಅವರು ತಿಳಿಸಿದರು.

    ಮಾವಿನ ದರ ಇಂತಿದೆ. ಬಾದಾಮಿ ರೂ.100, ಇಮಾಮಿ ಪಸಂದ್ ರೂ.200, ಆಲ್ಫೊನ್ಸೋ ರೂ.150, ಕೇಸರ್ ರೂ.200, ದಶೇರಿ ರೂ.180, ಮಲ್ಲಿಕಾ ರೂ.100, ಮಾಲ್ಗೋವಾ ರೂ.200, ಸಿಂಧೂರ ರೂ.60, ರಸಪುರಿ ರೂ.100, ತೋತಪುರಿ ರೂ.40, ಕಾಲಾಪಾಡಿ 150, ಸಕ್ಕರೆ ಗುತ್ತಿ 200, ರುಮಾನಿ 100 ದರದಲ್ಲಿ ಮಾವು ದೊರೆಯಲಿದೆ.

    Previous Articleಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    Next Article ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ

    Related Posts

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.