ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು

ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ ಘಟನೆ.

ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ದುರ್ಮರಣ.

ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದ ಕಾಡಾನೆ.

ಆನೆ ದಾಳಿಯಿಂದ ಓಡಿ ಹೋಗಿ ಜೀವ ಉಳಿಸಿಕೊಂಡ ಇಬ್ಬರು ಕಾಫಿ ತೋಟದ ಕಾರ್ಮಿಕರು.

ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ.

ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ; ಪ್ರಾಣಾಪಾಯದಿಂದ ಪಾರು

Exit mobile version