Close Menu
Kodagu News
    ಹೊಸ ಸುದ್ದಿ

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»18.500 ಕೆ.ಜಿ ಗಿಂತ ಹೆಚ್ಚಿನ ಸರಕು ಸಾಗಣೆಗೆ ಜುಲೈ 09 ರವರೆಗೆ ನಿಷೇಧ
    ಅಂತರರಾಷ್ಟ್ರೀಯ

    18.500 ಕೆ.ಜಿ ಗಿಂತ ಹೆಚ್ಚಿನ ಸರಕು ಸಾಗಣೆಗೆ ಜುಲೈ 09 ರವರೆಗೆ ನಿಷೇಧ

    ಭಾರೀ ವಾಹನಗಳ ಸಂಚಾರ ನಿಷೇಧ

    ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸುವ ಬಗ್ಗೆ ತೀರ್ಮಾನಿಸಲಾಗಿರುತ್ತದೆ.

    ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ.

    ಆದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ (5) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂನ್, 10 ರಿಂದ ಜುಲೈ, 09 ರವರೆಗೆ ವಾಹನ ಸಂಚಾರ ವ್ಯವಸ್ಥೆ ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

    ನಿರ್ಭಂದಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು.

    ನಿರ್ಭಂದದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ).

    ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕ ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ, ಇವರಿಗೆ ಅನುಮತಿಸಿದೆ.

    ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

    Previous Articleಕುಶಾಲನಗರದಲ್ಲಿ ‘ವಿಶ್ವ ಪರಿಸರ ದಿನ’ ಆಚರಣೆ
    Next Article ಕುಶಾಲನಗರ ವ್ಯಾಪ್ತಿಯಲ್ಲಿ ಮಳೆಯ ಕಣ್ಣಾ ಮುಚ್ಚಾಲೆ

    Related Posts

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.