
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ವಿ ಬಾಡಗದಲ್ಲಿ ನಿರ್ಮಾಣ ಆಗುತ್ತಿರುವ ಕ್ರೀಡಾ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ಕಾಮಗಾರಿಯ ಪ್ರಗತಿಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಇಂದು ಪರಿಶೀಲಿಸಿದರು.
ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳುವ ಮೊದಲು ನೇರವಾಗಿ ಕ್ರೀಡಾ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ತೆರಳಿದ ಮಾನ್ಯ ಶಾಸಕರು, ಕಾಮಗಾರಿಯ ಪ್ರಗತಿಯ ಬಗ್ಗೆ ಸ್ಥಳದಲ್ಲಿ ಉಪಸ್ಥಿತರಿದ್ದ ಇಂಜಿನಿಯರ್ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ಬಳಿಕ ಸ್ಥಳೀಯರು ಹಾಗೂ ಇಂಜಿನಿಯರ್ ರವರರೊಂದಿಗೆ ಚರ್ಚಿಸಿದ ಮಾನ್ಯ ಶಾಸಕರು, ಹಂತ ಹಂತವಾಗಿ ಸದ್ರಿ ಕಾಮಗಾರಿಯೂ ಶೀಘ್ರದಲ್ಲಿ ಮುಕ್ತಾಯವಾಗಲಿದೆ ಎಂದು ಭರವಸೆ ನೀಡಿದರು.
ಬಳಿಕ ಸ್ಥಳದಲ್ಲಿದ್ದ ಉಪಸ್ಥಿತರಿದ್ದ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ನಿರ್ಗಮಿತ ಮುಖ್ಯಮಂತ್ರಿ ಮಾನ್ಯ ಸಿದ್ದರಾಮಯ್ಯರವರು ಬಜೆಟ್ ನಲ್ಲಿ ನೀಡಿದ ಅನುದಾನದ ಬಗ್ಗೆ ಸ್ಮರಿಸುತ್ತಾ, ರಾಜ್ಯಸಭಾ ಸದಸ್ಯರಾದ ಅಜಯ್ ಮಾರ್ಕನ್ ರವರು ನೀಡಿರುವ ಹಣಕಾಸಿನ ನೆರವಿನ ಬಗ್ಗೆ ಪ್ರಸ್ತಾಪಿಸಿದರು. ಮಾಧ್ಯಮದವರಿಗೆ ಕ್ರೀಡಾ ವಸತಿ ನಿಲಯ ಹಾಗೂ ತರಬೇತಿ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡುತ್ತಾ ಸುಮಾರು 100 ಮಕ್ಕಳಿಗೆ ವಸತಿ ವ್ಯವಸ್ಥೆಯೊಂದಿಗೆ ಸಾವಿರಕ್ಕೂ ಅಧಿಕ ಕ್ರೀಡಾಪಟುಗಳಿಗೆ ಇಲ್ಲಿ ಕ್ರೀಡಾ ತರಬೇತಿ ಒದಗಿಸಲು ಯೋಜನೆ ರೂಪಿಸಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಂಜಿತಂಡ ಗಿಣಿ ಮೊಣ್ಣಪ್ಪ, ಕಂಜಿತಂಡ ಪೂವಣ್ಣ, ಕೊಂಗಂಡ ಕಾಶಿ ಕಾವೇರಪ್ಪ, ಕೊಲ್ಲಿರ ಬೋಪಣ್ಣ, ಉಮೇಶ್ ಕೇಚಮಯ್ಯ, ಗಿರೀಶ್ , ಸುಂದರ, ಕೋಲತಂಡ ರಘು ಮಾಚಯ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಮುಖಂಡರುಗಳಾದ ಸೂರಜ್ ಹೊಸೂರು, ಕೇಚಮಾಡ ಸಿದ್ದು ನಾಚಪ್ಪ, ಬಟ್ಟಕಾಳಂಡ ರಾಜ, ಮಂಜುನಾಥ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.


