ಕಾರ್ಮಿಕರ ಮೇಲೆ ಕಾಡಾನೆ ದಾಳಿ ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ.

ಸಿದ್ದಾಪುರ : ಕಾಫಿ ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಒಂಟಿ ಸಲವೊಂದು ಏಕಾಏಕಿ ದಾಳಿಗೆ ಮುಂದಾಗಿದ್ದು, ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ನಡೆದಿದೆ.

ಎಂದಿನಂತೆ ಕಾರ್ಮಿಕರು ತೋಟಕ್ಕೆ ಕೆಲಸಕ್ಕೆ ತೆರಳಿದ್ದಾರೆ. ಈ ಸಂದರ್ಭ ಪ್ರತ್ಯಕ್ಷವಾದ ಆನೆಯೊಂದು ಕಾರ್ಮಿಕರನ್ನು ಅಟ್ಟಾಡಿಸಿದೆ. ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಕಾರ್ಮಿಕರು ಎದ್ದುಬಿದ್ದು ಓಡಿದ್ದು, ಗಿಡಗಳ ನಡುವೆ ಓಡುವ ಸಂದರ್ಭ ಮಹಿಳೆಯೊಬ್ಬರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಮಹಿಳೆಯ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯ ನಿವಾಸಿ ನಾಗರಾಜು ಎಂಬುವವರ ಪತ್ನಿ ಸೌಮ್ಯ ಎಂಬುವವರೇ ಗಾಯಗೊಂಡಿರುವ ಮಹಿಳೆ.
ಗಾಯಾಳುವನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಸುತ್ತಮುತ್ತಲ ಪ್ರದೇಶದ ಕಾರ್ಮಿಕರಲ್ಲಿ ಭೀತಿ ಹೆಚ್ಚಾಗಿದ್ದು ,ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬಾರಿ ಅನಾಹುತ ಸಂಭವಿಸುವ ಮೊದಲು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

Exit mobile version