ಎಸ್.ಐ.ಆರ್ ಕಾರ್ಯಕ್ರಮ: ಪೊನ್ನಂಪೇಟೆ ಬೆಳ್ಳೂರಿನಲ್ಲಿ ಅರ್ಜಿ ಸಲ್ಲಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಶಾಸಕ ಪೊನ್ನಣ್ಣ
ಪೊನ್ನಂಪೇಟೆ: ರಾಜ್ಯಾದ್ಯಂತ ನಡೆಯುತ್ತಿರುವ ಎಸ್.ಐ.ಆರ್ ಕಾರ್ಯಕ್ರಮದ ಭಾಗವಾಗಿ ಇಂದು ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಬೆಳ್ಳೂರಿನಲ್ಲಿರುವ ಪೊನ್ನಣ್ಣ ಅವರ ನಿವಾಸದಲ್ಲಿ ಅರ್ಜಿ ಭರ್ತಿ ಮಾಡುವ ಮೂಲಕ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರಲೇಬೇಕು ಎಂದು ಹೇಳಿದರು.
“ಮತದಾನ ಎಂಬುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಹಕ್ಕು. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಯಾರೂ ಇದನ್ನು ಕಸಿದುಕೊಳ್ಳದಂತೆ ನಾವೆಲ್ಲರೂ ಜಾಗೃತಿ ವಹಿಸಿಕೊಳ್ಳಬೇಕು” ಎಂದು ಅವರು ಹೇಳಿದರು.
ಕೊನೆಯಲ್ಲಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ನೀಡಿ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಶಾಸಕ ಪೊನ್ನಣ್ಣ ಮನವಿ ಮಾಡಿದರು.


