Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ನೀರಿನ ಸೆಳೆತಕ್ಕೆ ಸಿಲುಕಿದ್ದ ಆಂಧ್ರದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ
    ಅಂತರರಾಷ್ಟ್ರೀಯ

    ನೀರಿನ ಸೆಳೆತಕ್ಕೆ ಸಿಲುಕಿದ್ದ ಆಂಧ್ರದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ

     

    ಮಲ್ಲಳ್ಳಿ ಜಲಪಾತದಲ್ಲಿ ಅವಘಡ ತಪ್ಪಿತು:

     

    ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಸ್ಥಳೀಯ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದೆ. ಆಂಧ್ರಪ್ರದೇಶದಿಂದ ಪ್ರವಾಸಕ್ಕೆ ಬಂದಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿ ಜೀವ ಉಳಿಸಿಕೊಳ್ಳಲು ಬಂಡೆಯನ್ನು ಹಿಡಿದು ಸುಮಾರು ಒಂದು ಗಂಟೆ ಕಾಲ ಪರದಾಡಿದ ಘಟನೆ ಸೋಮವಾರ ನಡೆದಿದೆ.

    ರಕ್ಷಣೆಗೊಂಡ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಮೂಲದ ಗಣೇಶ್ ನಾಯಕ್ (21) ಹಾಗೂ ಸಂತೋಷ್ ಕುಮಾರ್ (23) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಸ್ನೇಹಿತರೊಂದಿಗೆ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ಆಗಮಿಸಿದ್ದರು.

    ಮಾಹಿತಿಯ ಪ್ರಕಾರ, ಜಲಪಾತದ ಬಳಿ ಅಳವಡಿಸಲಾಗಿದ್ದ ಸುರಕ್ಷತಾ ಬೇಲಿಯನ್ನು ಲೆಕ್ಕಿಸದೆ ಇಬ್ಬರು ವಿದ್ಯಾರ್ಥಿಗಳು ಹೊಳೆಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದರು. ಇದೇ ವೇಳೆ ಮೇಲ್ಭಾಗದಲ್ಲಿರುವ ಜಲವಿದ್ಯುತ್ ಉತ್ಪಾದನಾ ಘಟಕದಿಂದ ನೀರನ್ನು ಹರಿಸಲಾಯಿತು. ನೀರು ಬಿಡುವ ಮೊದಲು ನಿಯಮಾನುಸಾರ ಸೈರನ್ ಮೊಳಗಿಸಲಾಗಿದ್ದರೂ, ನೀರಿನಲ್ಲಿ ತಲ್ಲೀನರಾಗಿದ್ದ ವಿದ್ಯಾರ್ಥಿಗಳಿಗೆ ಅದರ ಎಚ್ಚರಿಕೆ ಕೇಳಿಸಲಿಲ್ಲ ಎನ್ನಲಾಗಿದೆ.

    ಕೆಲವೇ ಕ್ಷಣಗಳಲ್ಲಿ ಹೊಳೆಯಲ್ಲಿ ನೀರಿನ ಹರಿವು ಹಾಗೂ ರಭಸ ಏಕಾಏಕಿ ಹೆಚ್ಚಾಗಿದ್ದು, ಇಬ್ಬರೂ ನೀರಿನ ಸೆಳೆತಕ್ಕೆ ಸಿಲುಕಿದರು. ಅಪಾಯದ ಪರಿಸ್ಥಿತಿಯನ್ನು ಅರಿತ ಅವರು ಸಮೀಪದಲ್ಲಿದ್ದ ಬಂಡೆಯನ್ನು ಹಿಡಿದುಕೊಂಡು ಜೀವ ಉಳಿಸಿಕೊಳ್ಳಲು ಹರಸಾಹಸ ಪಟ್ಟರು. ನೀರಿನ ಮಟ್ಟ ನಿರಂತರ ಏರಿಕೆಯಾಗುತ್ತಿದ್ದರಿಂದ ಅವರು ಅಲ್ಲಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದರು.

    ಸುಮಾರು ಒಂದು ಗಂಟೆಯ ಬಳಿಕ ಸ್ಥಳೀಯ ಗ್ರಾಮಸ್ಥರ ಗಮನಕ್ಕೆ ಈ ಘಟನೆ ಬಂದಿದೆ. ತಕ್ಷಣವೇ ಅವರು ಜಲವಿದ್ಯುತ್ ಘಟಕದ ಅಧಿಕಾರಿಗಳಿಗೆ ಮಾಹಿತಿ ನೀಡಿ ನೀರು ಹರಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಮನವಿ ಮಾಡಿದರು. ಬಳಿಕ ಅಗ್ನಿಶಾಮಕ ಇಲಾಖೆಗೆ ಮಾಹಿತಿ ರವಾನಿಸಲಾಯಿತು.

    ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಗ್ಗ ಸೇರಿದಂತೆ ಅಗತ್ಯ ರಕ್ಷಣಾ ಉಪಕರಣಗಳನ್ನು ಬಳಸಿ ಅಪಾಯದ ನಡುವೆ ಸಿಲುಕಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದು ಜೀವ ಉಳಿಸಿದರು.

    ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳಾದ ಪವನ್ ಕುಮಾರ್, ಪಿ.ಎಸ್. ನಾಗೇಶ್, ಲತೇಶ್ ಕುಮಾರ್, ಪ್ರಶಾಂತ್ ಹಾಗೂ ವಿನಿ ಕುಮಾರ್ ಪ್ರಮುಖ ಪಾತ್ರವಹಿಸಿದರು. ಬಳಿಕ ಇಬ್ಬರು ವಿದ್ಯಾರ್ಥಿಗಳನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವೈದ್ಯರ ಪ್ರಕಾರ, ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಗಂಭೀರ ಗಾಯಗಳಿಲ್ಲ.

    ಈ ಘಟನೆ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಿರುವ ಅಧಿಕಾರಿಗಳು, ಜಲಪಾತ ಹಾಗೂ ನದಿ ತೀರಗಳಲ್ಲಿ ಅಳವಡಿಸಿರುವ ಸುರಕ್ಷತಾ ಬೇಲಿಗಳನ್ನು ಯಾವುದೇ ಕಾರಣಕ್ಕೂ ದಾಟಬಾರದು ಎಂದು ಮನವಿ ಮಾಡಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಜಲವಿದ್ಯುತ್ ಘಟಕಗಳಿಂದ ಏಕಾಏಕಿ ನೀರು ಬಿಡುವ ಸಾಧ್ಯತೆ ಇರುವುದರಿಂದ, ಎಚ್ಚರಿಕೆ ಸೈರನ್‌ಗಳಿಗೆ ಗಮನ ನೀಡುವುದು ಹಾಗೂ ನಿಷೇಧಿತ ಪ್ರದೇಶಗಳಿಗೆ ಪ್ರವೇಶಿಸದಿರುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

    Previous Articleಮೂರು ದಿನವಾದರು ಮರದ ದಿಮ್ಮಿ ತೆರವುಗೊಳಿಸದ ಅರಣ್ಯ ಇಲಾಖೆ
    Next Article ಬಾಳುಗೊಡುವಿನಲ್ಲಿ ತಡೆಗೋಡೆ ಕುಸಿತ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.