
ಗೋಣಿಕೊಪ್ಪಲು, ಜುಲೈ 9: ಕೊಡಗು ಜಿಲ್ಲೆಯ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ (ರಿ.) ವತಿಯಿಂದ ಕೈಕೇರಿ, ಗೋಣಿಕೊಪ್ಪಲಿನಲ್ಲಿ ನಿರ್ಮಿಸಲಾದ ನೂತನ ಸಭಾಭವನ ಹಾಗೂ ನೂತನ ಅನ್ನಪೂರ್ಣ ಭವನದ ಲೋಕಾರ್ಪಣೆ ಶುಭ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಪೂಜ್ಯ ಶ್ರೀಗಳು, ಸಂಘದ ಅಧ್ಯಕ್ಷರು, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.
ನೂತನ ಸಭಾಭವನ ಹಾಗೂ ಅನ್ನಪೂರ್ಣ ಭವನವು ಸಮುದಾಯದ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವದ ಕೊಡುಗೆಯಾಗಲಿದ್ದು, ಸಂಘದ ಮುಂದಿನ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

