Close Menu
Kodagu News
    ಹೊಸ ಸುದ್ದಿ

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    • ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಶಾಂತಿಯುತ ಪ್ರತಿಭಟನೆ; ನೀಟ್ ಪರೀಕ್ಷೆ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ
    ಆರೋಗ್ಯ

    ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ

    ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ

    ಅಶೋಕ್_ಮಡಿಕೇರಿ

     

    ತುಮಕೂರು, ಜು.9: ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪ್ರಶಸ್ತಿಯತ್ತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ.

    ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ತುಮಕೂರು ತಂಡವನ್ನು ಎದುರಿಸಿದ ಕೊಡಗು ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ 8-0 ಗೋಲುಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿತು. ತಂಡದ ಪರ ಸಬಿತ್ ಎರಡು ಗೋಲು, ಸವಾದ್ ಎರಡು ಗೋಲು, ಫಾರೂಕ್ ಒಂದು ಗೋಲು, ಅಜಿತ್ ಒಂದು ಗೋಲು ಹಾಗೂ ದಿವಾಕರ್ ಒಂದು ಗೋಲು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕೊಡಗು ತಂಡದ ಸಮನ್ವಯದ ಆಟ, ವೇಗದ ಪಾಸ್‌ಗಳು ಮತ್ತು ಪರಿಣಾಮಕಾರಿ ದಾಳಿ ಎದುರಾಳಿ ತಂಡವನ್ನು ಸಂಪೂರ್ಣವಾಗಿ ಕಟ್ಟಿಹಾಕಿತು.

    ಎರಡನೇ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವನ್ನು ಎದುರಿಸಿದ ಕೊಡಗು ತಂಡವು ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆದಿತು. ಪಂದ್ಯದುದ್ದಕ್ಕೂ ಎದುರಾಳಿಗೆ ಯಾವುದೇ ಅವಕಾಶ ನೀಡದ ಕೊಡಗು ತಂಡವು 4-0 ಗೋಲುಗಳ ಅಂತರದಿಂದ ಜಯಭೇರಿ ಬಾರಿಸಿತು. ಈ ಪಂದ್ಯದಲ್ಲಿ ರಂಗ ಎರಡು ಗೋಲು, ತಂಡದ ನಾಯಕ ವಿಜು ಒಂದು ಗೋಲು ಹಾಗೂ ಮುಸ್ತಾಕ್ ಒಂದು ಗೋಲು ದಾಖಲಿಸಿ ತಂಡದ ಗೆಲುವನ್ನು ಖಚಿತಪಡಿಸಿದರು.

    ಕೊಡಗು ತಂಡದ ನಾಯಕನಾಗಿ ವಿಜು ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಮುಖ್ಯ ಕೋಚ್ ಜಗದೀಶ್ ಪಾಣತಾಲೆ ಅವರ ಮಾರ್ಗದರ್ಶನದಲ್ಲಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ವ್ಯವಸ್ಥಾಪಕರಾಗಿ ದರ್ಶನ್ ಸುಕುಮಾರ್ ಹಾಗೂ ಸಹಾಯಕ ಕೋಚ್ ಆಗಿ ದೀಪು ಮಾಚ್ಚಯ್ಯ ತಂಡದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ.

    ಟೂರ್ನಿಯಲ್ಲಿ ಕೊಡಗು ತಂಡದ ಸತತ ಎರಡು ಗೆಲುವು ಜಿಲ್ಲೆಯ ಫುಟ್‌ಬಾಲ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದು, ಮುಂದಿನ ಪಂದ್ಯಗಳಲ್ಲಿಯೂ ಇದೇ ಪ್ರದರ್ಶನ ಮುಂದುವರಿಸಿ ಪ್ರಶಸ್ತಿ ಗೆಲ್ಲಲಿ ಎಂದು ಜಿಲ್ಲೆಯ ಕ್ರೀಡಾಭಿಮಾನಿಗಳು ಶುಭ ಹಾರೈಸಿದ್ದಾರೆ.

    Previous Articleಕರಡಿಗೋಡು ಚಿಕ್ಕನಹಳ್ಳಿ ರಸ್ತೆ ಸಂಚಾರ ಕಡಿತ
    Next Article ಹುಲಿತಾಳ : ಧಾರಾಕಾರ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಸಂಪೂರ್ಣ ಹಾನಿ

    Related Posts

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026

    ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.