
ಮಡಿಕೇರಿ: ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ಶ್ರೀ ವಿಕಾಸ್ ಕುಮಾರ್ ವಿಕಾಸ್, ಐಪಿಎಸ್ ಅವರು ಇಂದು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.
ಭೇಟಿಯ ವೇಳೆ ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ಸಮಗ್ರ ಚರ್ಚೆ ನಡೆಸಿದರು. ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ವತಿಯಿಂದ ಐಜಿಪಿ ಅವರಿಗೆ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

