ಬೇಗೂರಿನಲ್ಲಿ ಹುಲಿ ದಾಳಿ: ಹಸು ಬಲಿ
ಪೊನ್ನಂಪೇಟೆ: ತಾಲ್ಲೂಕಿನ ಬೇಗೂರು ಗ್ರಾಮದ ಕೊಟ್ಟಂಗಡ ನಿವಾಸಿ ರಾಜ ಸುಬ್ಬಯ್ಯ ಅವರ ಗದ್ದೆಯಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಶುಕ್ರವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಕಳೆದ ಎರಡು ವರ್ಷಗಳಲ್ಲಿ ಇದೇ ಕುಟುಂಬದ ಮೂರನೇ ಹಸುವನ್ನು ಹುಲಿ ಬಲಿ ಪಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡುವುದರ ಜೊತೆಗೆ ಹುಲಿ ಹಾವಳಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

