ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹24 ಲಕ್ಷ ವೆಚ್ಚದ ಮೂರು ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ
ವಿರಾಜಪೇಟೆ
ಬೊಳ್ಳುಮಾಡುವಿನಿಂದ ಕಾಕೋಟುಪರಂಬುಗೆ ಸಂಪರ್ಕ ಕಲ್ಪಿಸುವ ರಸ್ತೆ, ಪಾಲಚಂಡ ಐನ್ ಮನೆಗೆ ತೆರಳುವ ರಸ್ತೆ ಹಾಗೂ ಮಂಡೆಪಂಡ ಐನ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಶಾಸಕರು, ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಈ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದ್ದು, ನಿರ್ಮಿಸಿರುವ ರಸ್ತೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಬಳಿಕ ಸ್ಥಳೀಯ ನಿವಾಸಿಗಳ ಮನವಿಯ ಮೇರೆಗೆ ಕಾಲೋನಿಗೆ ಭೇಟಿ ನೀಡಿದ ಶಾಸಕರು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ, ನಿವಾಸಿಗಳ ಅಹವಾಲುಗಳನ್ನು ಆಲಿಸಿದರು. ನಂತರ ಗ್ರಾಮಸ್ಥರು ನಿರ್ಮಿಸಿರುವ ಮಾದೇರಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷ ಬಟ್ಟಕಾಳಂಡ ರಾಜ ದಿನೇಶ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಘಟಕದ ಅಧ್ಯಕ್ಷ ರಫೀಕ್, ನಾಸಿರ್, ಬೂತ್ ಅಧ್ಯಕ್ಷ ಪಾಲಚಂಡ ಸುರೇಶ್ ಸೇರಿದಂತೆ ಹಲವು ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


