
ಬೂತ್ ಸಂಖ್ಯೆ 221ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಭಾಗವಹಿಸಿ, ಅನೇಕ ಮನೆಗಳಿಗೆ ಭೇಟಿ ನೀಡಿ ಇದುವರೆಗೆ ನಡೆದಿರುವ ಎಸ್‌ಐಆರ್ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಜ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಎನ್ಯೂಮರೇಷನ್ (Enumeration) ಫಾರ್ಮ್ ಪಡೆಯದವರು ಕೂಡಲೇ ತಮ್ಮ ವ್ಯಾಪ್ತಿಯ ಬಿಎಲ್‌ಒಗಳಿಂದ ಫಾರ್ಮ್ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಿದರು.
ನಂತರ ಅವರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಬಿಎಲ್‌ಒ ಅವರೊಂದಿಗೆ ಎಸ್‌ಐಆರ್ ಅಭಿಯಾನದ ಪ್ರಗತಿ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಬೂತ್‌ನ ಬಿಎಲ್-2, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಎಂ. ರವಿ ಮೊಗೇರ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ಬಿಎಲ್‌ಒ ಗೀತಾ, ಸುಧಾಕರ್ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


