ಕುಶಾಲನಗರ, ಜು.25: ಬೈಚನಹಳ್ಳಿ ಗ್ರಾಮದ ಕಾವೇರಿ ಬಡಾವಣೆಯಲ್ಲಿರುವ ಪುರಸಭೆಯ ಅಮೂಲ್ಯ ಜಾಗ ದಟ್ಟ ಕಾಡಾಗಿ ಸಾರ್ವಜನಿಕರಿಗೆ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದೆ.

ಜಾಗದಲ್ಲಿನ ಕಳೆ-ಗಿಡಗಂಟೆಗಳನ್ನು ತೆರವುಗೊಳಿಸಿ, ಶಿಥಿಲಗೊಂಡ ಕಟ್ಟಡವನ್ನು ನೆಲಸಮಗೊಳಿಸಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಿಸುವಂತೆ ಕರವೇ ಒತ್ತಾಯಿಸಿದೆ. ಮನವಿಗೆ ಸ್ಪಂದಿಸಿದ ಮುಖ್ಯಾಧಿಕಾರಿ ಗಿರೀಶ್ ಅವರು 10 ದಿನಗಳೊಳಗೆ ಜಾಗವನ್ನು ಸ್ವಚ್ಛಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮುರುಗೇಶ್ ಸೇರಿದಂತೆ ಪದಾಧಿಕಾರಿಗಳು, ಜಾಗವನ್ನು ಅಭಿವೃದ್ಧಿಪಡಿಸಿ ಪುರಸಭೆಗೆ ಆದಾಯ ತರುವ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು. ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಸ್ವಾಭಿಮಾನಿ ಬಣ ಎಚ್ಚರಿಸಿದೆ.

Exit mobile version