ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಶಾಂತಿಯುತ ಪ್ರತಿಭಟನೆ; ನೀಟ್ ಪರೀಕ್ಷೆ ವಿರುದ್ಧ ಆಕ್ರೋಶ
ಮಡಿಕೇರಿ, ಜು. 25: ನೀಟ್ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳ ಆತಂಕ ಹಾಗೂ ಅಸಮಾಧಾನವನ್ನು ವ್ಯಕ್ತಪಡಿಸಿ ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಶನಿವಾರ ಶಾಂತಿಯುತ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಗೌರಿ, “ನಾವು ಯಾವುದೇ ರಾಜಕೀಯ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ಇಲ್ಲ. ಪಕ್ಷಾತೀತವಾಗಿ ಸರ್ಕಾರವನ್ನು ಪ್ರಶ್ನಿಸಲು ಬಂದಿದ್ದೇವೆ. ನಮಗೆ ಯಾವುದೇ ರಾಜಕೀಯ ಪಕ್ಷದ ಬೆಂಬಲವಿಲ್ಲ. ಸಂವಿಧಾನಾತ್ಮಕವಾಗಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ,” ಎಂದು ಹೇಳಿದರು.
ಮತ್ತೋರ್ವ ವಿದ್ಯಾರ್ಥಿ ನಿತಿನ್ ಥಾಮೋಸ್ ಮಾತನಾಡಿ, “ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ವ್ಯವಸ್ಥೆಯ ಲೋಪಗಳಿಂದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಕ್ರಮಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.


