ವಿರಾಜಪೇಟೆ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಡವ ಸಾಹಿತ್ಯ ಅಕಾಡೆಮಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವು-ಬೆಳವಣಿಗೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ಸಮುದಾಯದಲ್ಲಿ ಸಂಸ್ಕೃತಿಯ ಮಹತ್ವದ ಅರಿವು ಮೂಡಿಸಲು ನೆರವಾಗುತ್ತವೆ ಎಂದರು.
ಬಹು ಪುರಾತನವಾದ ಕೊಡವ ಸಂಸ್ಕೃತಿ, ಭಾಷೆ ಹಾಗೂ ಸಾಹಿತ್ಯವನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಅಕಾಡೆಮಿಯೊಂದರದ್ದೇ ಅಲ್ಲ, ಸಮುದಾಯದ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಹೇಳಿದರು. ಆಧುನಿಕ ಯುಗದಲ್ಲಿ ಯುವ ಪೀಳಿಗೆ ತಮ್ಮ ಭಾಷೆ ಮತ್ತು ಸಂಸ್ಕೃತಿಯಿಂದ ದೂರವಾಗುತ್ತಿರುವುದು ಆತಂಕದ ಸಂಗತಿಯಾಗಿದ್ದು, ಎಲ್ಲರೂ ಜಾಗೃತರಾಗಿ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ವಿಧಾನ ಪರಿಷತ್ ಸದಸ್ಯೆ ಸುಜಾ ಕುಶಾಲಪ್ಪ, ಕೋರಂಡ ಶಿವಣ್ಣಿ ಬೆಳ್ಳಿಯಪ್ಪ, ಮಂಡೆಪಂಡ ರಾಬಿನ್ ಮಂದಪ್ಪ, ಮುಕ್ಕಾಟಿರ ಜಮುನ ಬೆಳ್ಳಿಯಪ್ಪ, ಮಚ್ಚಾರಂಡ ಕಿರಣ್ ಸೇರಿದಂತೆ ಕೊಡವ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.


