
ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
ವೀರಾಜಪೇಟೆ
: ವೀರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮತ್ತೂರು ಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನಧಿಕೃತವಾಗಿ ಸಮಾಧಿ (ಗೋರಿ) ನಿರ್ಮಿಸಲಾಗಿದೆ ಎಂದು ಆರೋಪಿಸಿ, ಅದರ ವಿರುದ್ಧ ಜುಲೈ 27ರಂದು ಬೆಳಿಗ್ಗೆ 10 ಗಂಟೆಗೆ ದೇವಾಲಯದ ಕಮಾನು ಬಳಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಹಿಂದೂ ಸುರಕ್ಷಾ ಸಮಿತಿ ಪ್ರಕಟಿಸಿದೆ.
ಸಮಿತಿಯ ಪ್ರಕಟಣೆಯಲ್ಲಿ, ಈ ಕೃತ್ಯದಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಕೊಡಗು ಜಿಲ್ಲೆ ಹಾಗೂ ಪಿರಿಯಾಪಟ್ಟಣ ಸುತ್ತಮುತ್ತಲಿನ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಘಟನೆಯನ್ನು ಖಂಡಿಸುವಂತೆ ಸಮಿತಿ ಮನವಿ ಮಾಡಿದೆ.

