ದೇಶ ಮೊದಲು, ರಾಜಕೀಯ ಬಳಿಕ: ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

ಮಡಿಕೇರಿ: ದೇಶದ ವಿಚಾರದಲ್ಲಿ ರಾಜಕೀಯಕ್ಕೆ ಸ್ಥಾನವಿಲ್ಲ ಎಂಬ ಸಂದೇಶ ಸಾರುವ ಅಪರೂಪದ ಕ್ಷಣಕ್ಕೆ ಮಡಿಕೇರಿ ಸಾಕ್ಷಿಯಾಯಿತು. ಕೊಡಗು ಪತ್ರಕರ್ತರ ಸಂಘ ಹಾಗೂ ರೋಟರಿ ಮಿಸ್ಟಿ ಹಿಲ್ಸ್ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಗೌಡ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವೀರ ಯೋಧರಿಗೆ ಗೌರವ ನಮನ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಒಟ್ಟಾಗಿ ಭಾಗವಹಿಸಿ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಮಂತರ್ ಗೌಡ, “ದೇಶ ಮೊದಲು, ಮಿಕ್ಕೆಲ್ಲವೂ ಬಳಿಕವಷ್ಟೇ. ದೇಶದ ಭದ್ರತೆ ಮತ್ತು ಗೌರವದ ವಿಚಾರ ಬಂದಾಗ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಅವಕಾಶವಿಲ್ಲ. ಎಲ್ಲರೂ ಒಂದಾಗಿ ದೇಶಕ್ಕಾಗಿ ನಿಲ್ಲಬೇಕು” ಎಂದು ಹೇಳಿದರು.

ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ poಸೇರಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಹಲವು ಮುಖಂಡರು ಮತ್ತು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಯೋಧರ ಸೇವೆಯನ್ನು ಕೊಂಡಾಡಲಾಯಿತು. ದೇಶದ ಏಕತೆ, ಅಖಂಡತೆ ಮತ್ತು ರಾಷ್ಟ್ರಭಕ್ತಿಯ ಸಂದೇಶವನ್ನು ಸಾರುವ ಈ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಪತ್ರಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ರಾಷ್ಟ್ರದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿತು.

Exit mobile version