ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

ಸೋಮವಾರಪೇಟೆ: ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ದೇಶವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಷ್ಟ್ರದ ಭದ್ರತೆ ಮತ್ತು ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ನೀತಿಗಳನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಸೇರಿದಂತೆ ಕೆಲವು ಪಕ್ಷಗಳು ದೇಶದ ಏಕತೆ ಮತ್ತು ಭದ್ರತೆಗೆ ಧಕ್ಕೆ ಉಂಟುಮಾಡುವ ರೀತಿಯ ನಿಲುವುಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ಹಿತಾಸಕ್ತಿ ಕ್ರಮಗಳಿಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್, ಹರಪಳ್ಳಿ ರವೀಂದ್ರ, ಪ್ರಸನ್ನ ಎಡಿಕೇರಿ, ದರ್ಶನ್ ಜಯಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆ ವೇಳೆ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Exit mobile version