ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

ಮಡಿಕೇರಿ: ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ರಾತ್ರಿಯಿಂದ ಬೀಸುತ್ತಿರುವ ಬಿರುಗಾಳಿ ಹಿನ್ನೆಲೆಯಲ್ಲಿ ರಸ್ತೆಬದಿಯಲ್ಲಿನ ಮರ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸಂಬಂಧ ಪಟ್ಟ ಇಲಾಖಾ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮರ ತೆರವುಗೊಳಿಸುವಲ್ಲಿ ಮುಂದಾಗಿದ್ದಾರೆ

ಮರ ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುವ ಕಾರ್ಯ ಮುಂದುವರಿದಿದೆ. ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

Exit mobile version