2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
ಮಡಿಕೇರಿ: 2ನೇ ಮೊಣ್ಣಂಗೇರಿ ಗ್ರಾಮದ ಸಂಪರ್ಕ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಬದಿ ಮಣ್ಣು ಕುಸಿದಿರುವ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ನಿರಂತರ ಮಳೆ ಹಿನ್ನೆಲೆಯಲ್ಲಿ ರಸ್ತೆ ಬದಿ ಮಣ್ಣು ಕುಸಿದಿದ್ದು, ರಸ್ತೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಇದರಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ.
ಸಂಬಂಧಪಟ್ಟ ಇಲಾಖೆ ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಕುಸಿದಿರುವ ಭಾಗವನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.



