ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
ಮಡಿಕೇರಿ: ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಯ ಪರಿಣಾಮ ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರವೊಂದು ಧರೆಗುರುಳಿದೆ.
ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಹಾಕತ್ತೂರು–ಬಿಳಿಗೇರಿ ನಡುವಿನ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ.
ಮರ ತೆರವುಗೊಳಿಸುವ ಕಾರ್ಯ ನಡೆಯುವವರೆಗೆ ವಾಹನ ಸವಾರರು ಮೇಕೇರಿ ಅಥವಾ ಕಗ್ಗೋಡು ಮಾರ್ಗವನ್ನು ಪರ್ಯಾಯವಾಗಿ ಬಳಸುವಂತೆ ಮನವಿ ಮಾಡಲಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಮರಗಳು ಬೀಳುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.



