ಅಮ್ಮತ್ತಿ–ಗೋಣಿಕೊಪ್ಪ ಮಾರ್ಗದ ಸರ್ಕಾರಿ ಬಸ್‌ ಅವ್ಯವಸ್ಥೆಗೆ ಪ್ರಯಾಣಿಕರ ಆಕ್ರೋಶ

ಕೊಡಗು: ಜಿಲ್ಲೆಯ ಅಮ್ಮತ್ತಿ–ಗೋಣಿಕೊಪ್ಪ ನಡುವೆ ಸಂಚರಿಸುವ ಸರ್ಕಾರಿ ಬಸ್‌ವೊಂದರಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಬಸ್‌ನ ಮೇಲ್ಛಾವಣಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ತೂತು ಬಿದ್ದಿರುವ ಪರಿಣಾಮ ಮಳೆ ನೀರು ಬಸ್‌ನೊಳಗೆ ಸೋರಿಕೆಯಾಗಿದೆ. ಇದರಿಂದ ಪ್ರಯಾಣಿಕರು ಬಸ್‌ನೊಳಗೇ ಕೊಡೆ ಹಿಡಿದು ಪ್ರಯಾಣಿಸುವಂತಾಗಿದೆ.

ಈ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾರ್ವಜನಿಕರಿಗೆ ಸೇವೆ ನೀಡಬೇಕಾದ ಸರ್ಕಾರಿ ಬಸ್‌ಗಳ ನಿರ್ವಹಣೆ ಈ ಮಟ್ಟಕ್ಕೆ ಹದಗೆಟ್ಟಿರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಯಾಣಿಕರ ಸುರಕ್ಷತೆ ಹಾಗೂ ಅನುಕೂಲಕ್ಕೆ ಆದ್ಯತೆ ನೀಡಿ, ಹದಗೆಟ್ಟಿರುವ ಬಸ್‌ಗಳನ್ನು ಕೂಡಲೇ ದುರಸ್ತಿಪಡಿಸಬೇಕು ಎಂದು ಸಾರಿಗೆ ಇಲಾಖೆಗೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

Exit mobile version