ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ
ವಿರಾಜಪೇಟೆ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕರಿಗೆ ನ್ಯಾಯಾಲಯವು ₹25,000 ದಂಡ ವಿಧಿಸಿದೆ.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಾಜಪೇಟೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಾಹನ ಮಾಲೀಕರಾದ ಸಿಜಿ ಮತ್ತು ಜಿ.ಎಂ.ಎಫ್.ಸಿ. ನ್ಯಾಯಾಲಯದ ಮೂಲಕ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಅಪ್ರಾಪ್ತರು ವಾಹನ ಚಲಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡ ಕ್ರಮದ ಭಾಗವಾಗಿ ಈ ಪ್ರಕರಣ ದಾಖಲಾಗಿದ್ದು, ಪೋಷಕರು ಹಾಗೂ ವಾಹನ ಮಾಲೀಕರು ಅಪ್ರಾಪ್ತರಿಗೆ ವಾಹನ ನೀಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



