ಮಡಿಕೇರಿ, ಆ.7: ಮಡಿಕೇರಿ ಟೌನ್ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಹಾಗೂ ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಅವರು ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಬಿ.ಕೆ. ಜಗದೀಶ್ ಅವರು ಪ್ರಸ್ತುತ ಮಡಿಕೇರಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

ಇದೇ ವೇಳೆ, ಎರಡನೇ ಬಾರಿ ಮಡಿಕೇರಿ ಟೌನ್ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ.

Exit mobile version