ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ
ಸಿದ್ದಾಪುರ: ಮದ್ಯಪಾನ ಮಾಡಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ ಚಾಲಕನ ವಿರುದ್ಧ ಕೊಡಗು ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದು, ನ್ಯಾಯಾಲಯವು ₹12,000 ದಂಡ ವಿಧಿಸಿದೆ.
ಸಿದ್ದಾಪುರ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆಟೋ ಚಾಲಕ ಪತ್ತೆಯಾಗಿದ್ದಾನೆ. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪಿಸಿ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ, ಮಡಿಕೇರಿ ₹12 ಸಾವಿರ ದಂಡ ವಿಧಿಸಿದೆ.
ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಚಾಲಕನಷ್ಟೇ ಅಲ್ಲದೆ ಇತರ ವಾಹನ ಸವಾರರು ಹಾಗೂ ಸಾರ್ವಜನಿಕರ ಜೀವಕ್ಕೂ ಅಪಾಯ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಸಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸರು ಎಚ್ಚರಿಸಿದ್ದಾರೆ.
“ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ – ನಿಮ್ಮ ಜೀವ, ಮತ್ತೊಬ್ಬರ ಜೀವದ ಜೊತೆ ಆಟವಾಡಬೇಡಿ” ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

