ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಯಡೂರು ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಹಸುವನ್ನು ನೋಡಲು ಕಾಫಿ ತೋಟಕ್ಕೆ ತೆರಳಿದ್ದ ಅಣ್ಣಪ್ಪ (40) ಎಂಬ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ಅಣ್ಣಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಸಿಬ್ಬಂದಿ ಆಗಮಿಸಿದ್ದಾರೆ. ಗಾಯಗೊಂಡ ಅಣ್ಣಪ್ಪ ಅವರನ್ನು ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಮಡಿಕೇರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯಿಂದ ಯಡೂರು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

Exit mobile version