ಬಿರುನಾಣಿಯಲ್ಲಿ ಹುಲಿ ದಾಳಿಗೆ ಹಸು ಬಲಿ
ವಿರಾಜಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮದಲ್ಲಿ ಹುಲಿ ದಾಳಿ ನಡೆಸಿ ಹಸುವೊಂದನ್ನು ಬಲಿ ಪಡೆದಿರುವ ಘಟನೆ ನಡೆದಿದೆ.
ಬಿರುನಾಣಿ ಗ್ರಾಮದ ಪುತ್ತು ಭಗವತಿ ದೇವಸ್ಥಾನದ ಸಮೀಪ ರೈತ ಅನ್ನಳಮಾಡ ಚಿಪ್ಪ ಅಪ್ಪಚ್ಚು ಅವರಿಗೆ ಸೇರಿದ ಹಸುವನ್ನು ಗದ್ದೆಯಲ್ಲಿ ಮೇಯಲು ಕಟ್ಟಲಾಗಿತ್ತು. ಈ ವೇಳೆ ದಾಳಿ ನಡೆಸಿದ ಹುಲಿ ಹಸುವನ್ನು ಬಲಿ ಪಡೆದಿದೆ.
ಘಟನೆಯಿಂದ ಸ್ಥಳೀಯ ರೈತರು ಆತಂಕಗೊಂಡಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

