
ಕೊಡಗು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಶಿವಕುಮಾರ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ತೆರಳಿ ಪೂಜೆ ಸಲ್ಲಿಸುವಂತೆ ಸೂಚಿಸಿದ್ದರು.
ಅದರಂತೆ ತಲಕಾವೇರಿಗೆ ತೆರಳಿದ ಉಷಾ ಶಿವಕುಮಾರ್ ಅವರು ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಜನರ ಸುಖ-ಶಾಂತಿಗಾಗಿ ಪ್ರಾರ್ಥಿಸಿದರು.
ಇದೇ ವೇಳೆ ಭಾಗಮಂಡಲದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು.
ತಲಕಾವೇರಿಯಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಕೊಡಗಿನ ಮಹಿಳಾ ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

