ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ಕಾಡಾನೆ ದಾಳಿ ನಡೆಸಿದ್ದು, ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲನ್ ಪಾವರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದೇ ವೇಳೆ ಮತ್ತೋರ್ವ ಕಾರ್ಮಿಕ ಜಾದವ್ ಪಾವರಿ ಮೇಲೂ ಆನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರ ಮೇಲೂ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


