ಜಾನಪದ ಯುವ ಬ್ರಿಗೇಡ್ ಕೊಡಗು ಜಿಲ್ಲಾ ಸಂಚಾಲಕರಾಗಿ ಸುಜಯ್ ಟಿ.ಪಿ. ನೇಮಕ
ಮಡಿಕೇರಿ: ಕನ್ನಡ ಜಾನಪದ ಪರಿಷತ್ ಅಂಗಸಂಸ್ಥೆಯಾದ ಜಾನಪದ ಯುವ ಬ್ರಿಗೇಡ್ನ ಕೊಡಗು ಜಿಲ್ಲಾ ಸಂಚಾಲಕರಾಗಿ ಪೊನ್ನಂಪೇಟೆ ತಾಲೂಕಿನ ನೆಮ್ಮಲೆ ಗ್ರಾಮದ ಸುಜಯ್ ಟಿ.ಪಿ. ಅವರನ್ನು ನೇಮಕ ಮಾಡಲಾಗಿದೆ.
ಕನ್ನಡ ಜಾನಪದ ಪರಿಷತ್ ರಾಜ್ಯಾದ್ಯಂತ ಜಾನಪದ ಸಂರಕ್ಷಣೆ, ಜಾನಪದ ಕಲೆ ಹಾಗೂ ಕಲಾವಿದರ ಅಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಅಂಗಸಂಸ್ಥೆಯಾಗಿ 2020ರಲ್ಲಿ ಜಾನಪದ ಯುವ ಬ್ರಿಗೇಡ್ ಸ್ಥಾಪನೆಯಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ವಿಚಾರ ಸಂಕಿರಣಗಳು ಹಾಗೂ ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ.
ಯುವಜನತೆ ದೇಶದ ಭವಿಷ್ಯವಾಗಿದ್ದು, ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಜಾನಪದ ಚಟುವಟಿಕೆಗಳನ್ನು ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗೆ ವಿಸ್ತರಿಸುವ ಉದ್ದೇಶದಿಂದ ಸುಜಯ್ ಟಿ.ಪಿ. ಅವರನ್ನು ಕೊಡಗು ಜಿಲ್ಲಾ ಸಂಚಾಲಕರಾಗಿ ನೇಮಕ ಮಾಡಲಾಗಿದೆ.
ಜಿಲ್ಲೆಯಲ್ಲಿ ಹೋಬಳಿ ಹಾಗೂ ಗ್ರಾಮಮಟ್ಟದ ಸಂಚಾಲಕರನ್ನು ಆಯ್ಕೆ ಮಾಡಿಕೊಂಡು ಜಾನಪದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.


