ಮಡಿಕೇರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಮಂತರ್ ಗೌಡ ಧ್ವನಿ
ಮಡಿಕೇರಿ ವಿಧಾನಸಭಾ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಶಾಸಕ ಡಾ. ಮಂತರ್ ಗೌಡ ಅವರು ಇಂದು ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ಗ್ರಾಮೀಣ ಭಾಗದ ರಸ್ತೆಗಳಿಗೆ ಅನುದಾನ ಹಾಗೂ ಮಳೆಹಾನಿಯಿಂದ ಮನೆ ಕುಸಿದು ಹಾನಿಗೊಳಗಾದವರಿಗೆ ಬಾಕಿ ಉಳಿದಿರುವ ಪರಿಹಾರ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸದನದಲ್ಲಿ ಒತ್ತಾಯಿಸಿದರು.
ಮಡಿಕೇರಿ, ಕುಶಾಲನಗರ ಹಾಗೂ ಸೋಮವಾರಪೇಟೆ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನ ಹಾಗೂ ಪರಿಹಾರ ಒದಗಿಸುವಂತೆ ಸರ್ಕಾರದ ಗಮನಕ್ಕೆ ತಂದರು.

