
ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಜೀವಿತ್ ಚಂಗಪ್ಪ ಹಾಗೂ ಶೋಬಿತ್ ಕೆ.ಎಲ್. ಅವರು ರಾಜ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹರ್ಷಿತ್, ಸಾಯಿ ಹಾಗೂ ಜೀವಿತ್ ಫಾರ್ವರ್ಡ್ ಆಟಗಾರರಾಗಿದ್ದು, ಶೋಬಿತ್ ಗೋಲ್ ಕೀಪರ್ ಆಗಿ ತಂಡವನ್ನು ಪ್ರತಿನಿಧಿಸಲಿದ್ದಾರೆ.
ತರಬೇತುದಾರ ಹಂಚೆಟ್ಟಿರ ಈರಪ್ಪ ಅವರ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ.
ಆಗಸ್ಟ್ 21ರಂದು ಬೆಂಗಳೂರಿನ ಬಿಷಪ್ ಕಾಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಗೋವಾ ವಿರುದ್ಧ ಕರ್ನಾಟಕ ತಂಡದ ಮೊದಲ ಪಂದ್ಯ ನಡೆಯಲಿದೆ.
ನಾಲ್ವರು ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
KODAGUNEWS


