ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಘಟನೆ
ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗರೊಬ್ಬರು ಮೃತಪಟ್ಟಿರುವ ಘಟನೆ ಸಂಜೆ ನಡೆದಿದೆ.
ಸ್ಥಳೀಯ ಹೋಂಸ್ಟೇಗೆ ಆಗಮಿಸಿದ್ದ ಬೆಂಗಳೂರಿನ ಸುಮಾರು 40 ವರ್ಷದ ಮುರಳಿ ಕೃಷ್ಣ ಅವರು ವಿಹಾರಕ್ಕೆ ತೆರಳಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮುರಳಿ ಕೃಷ್ಣ ಮೃತಪಟ್ಟಿದ್ದಾರೆ.
ಘಟನೆಯಿಂದ ತೆರಾಲು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

