ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು

ಮಡಿಕೇರಿ: ನಗರದ ತಿಮ್ಮಯ್ಯ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ಯಾಕ್ಸಿ ಚಾಲಕ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್, ತಿಮ್ಮಯ್ಯ ಸರ್ಕಲ್ ಬಳಿಯ ನೂತನ ಪ್ರಯಾಣಿಕರ ತಂಗುದಾಣದ ಎದುರು ರಸ್ತೆಯಲ್ಲಿ ನಿಂತಿದ್ದ ಟ್ಯಾಕ್ಸಿ ಚಾಲಕ ಸಾಹಿಲ್ (24) ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಸಾಹಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ಸಾಹಿಲ್ ಮಡಿಕೇರಿಯ ಗಣಪತಿ ಬೀದಿ ನಿವಾಸಿಯಾಗಿದ್ದಾರೆ.

ಬೆಳಗಿನ ಜಾವ ಮಂಜು ಕವಿದಿದ್ದ ಹಿನ್ನೆಲೆ ರಸ್ತೆ ಸ್ಪಷ್ಟವಾಗಿ ಕಾಣಿಸದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

Exit mobile version