ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
ಮಳೆಗಾಗಿ ಪ್ರಾರ್ಥಿಸಿ ಕೊಡಗಿನ ಪಾಡಿಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು.
ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸೇರಿದಂತೆ ಭಕ್ತಾಧಿಗಳು ಉಪಸ್ಥಿತರಿದ್ದರು.


