ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಮಡಿಕೇರಿ, ಆ.25: ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಆ.23ರಂದು ನಡೆದ ರಾಷ್ಟ್ರ ಮಟ್ಟದ ಇಂಡಿಪೆಂಡೆನ್ಸ್ ಕಪ್–2026 ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ಮೂರ್ನಾಡು ಹಾಗೂ ಚೇರಂಬಾಣೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಒಕಿನೊವ ಷೋರಿನ್-ರಿಯೋ ಕರಾಟೆ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ದೇಶದ ವಿವಿಧ ಭಾಗಗಳಿಂದ ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು.

ಮೂರ್ನಾಡು ಎಜುಕೇಶನ್ ಸೊಸೈಟಿಯ ಅಲೈನಾ ಯು.ಎಸ್. ಕರಾಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಟ್ರೋಫಿ ಗಳಿಸಿದ್ದಾರೆ. ರಿಫಾ ಫಾತಿಮಾ ಬಿ.ಆರ್. ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಕುಮಿಟೆಯಲ್ಲಿ ತೃತೀಯ ಸ್ಥಾನ ಪಡೆದು ಟ್ರೋಫಿ ಪಡೆದಿದ್ದಾರೆ. ವರ್ಷಾ ಬಿ.ಎನ್. ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.

ಮೂರ್ನಾಡು ಹೈಸ್ಕೂಲ್‌ನ ಬಿಪಿನ್ ಚಿನ್ನಪ್ಪ ಬಿ.ಎಂ. ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ದುಷ್ಯಂತ್ ಮುತ್ತಣ್ಣ ಕೆ.ವಿ. ಕಟಾದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಕುಮಿಟೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸತೀಶ್ ಪಿ. ಕಟಾ ಮತ್ತು ಕುಮಿಟೆ ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಜಿತೇಂದ್ರ ರಾತೋರ್ ಮತ್ತು ಆದಿ ಬೋಪಣ್ಣ ಟಿ.ಎಂ. ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.

ಚೇರಂಬಾಣೆಯ ಜಿ.ಹೆಚ್.ಪಿ. ಶಾಲೆಯ ಶ್ರಾವ್ಯ ಎಂ.ಕೆ. ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗೆದ್ದಿದ್ದಾರೆ.

Exit mobile version