Close Menu
Kodagu News
    ಹೊಸ ಸುದ್ದಿ

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026

    ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್

    August 27, 2026

    ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    ಅಂತರರಾಷ್ಟ್ರೀಯ

    ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್

    ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುತ್ತಿದೆ; ಜನವಸತಿ ಮತ್ತು ಕೃಷಿ ಭೂಮಿಯನ್ನು ಅರಣ್ಯ ವ್ಯಾಪ್ತಿಗೆ ಸೇರಿಸದಂತೆ ಒತ್ತಾಯ — ಫಿಸಿಕಲ್ ವೆರಿಫಿಕೇಷನ್‌ಗೆ ಸಂಸದರಿಂದ ಸಲಹೆ

    ಮಡಿಕೇರಿ: ಕಸ್ತೂರಿರಂಗನ್ ವರದಿ ಅನುಷ್ಠಾನ ಕುರಿತು ಕೊಡಗಿನ ಜನತೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಯ ನೀಡಿದ್ದಾರೆ.

    ಮಡಿಕೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಪ್ರಮುಖರೊಂದಿಗೆ ಕಸ್ತೂರಿರಂಗನ್ ವರದಿ ಕುರಿತು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದರು.

    ಪ್ರಸ್ತುತ ಕರಡು ಅಧಿಸೂಚನೆಯ ಹಂತದಲ್ಲಿರುವುದರಿಂದ ಇನ್ನೂ ಹಲವು ಸುತ್ತಿನ ಚರ್ಚೆಗಳು ನಡೆಯಬೇಕಿವೆ. ಕೊಡಗಿನ ಜನರು ಪ್ರಕೃತಿಯನ್ನು ರಕ್ಷಿಸುವ ಹಾಗೂ ಗೌರವಿಸುವ ಗುಣ ಹೊಂದಿದ್ದು, ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಸ್ಥಳೀಯರ ಹಿತಾಸಕ್ತಿಯನ್ನು ಪರಿಗಣಿಸಬೇಕಾಗಿದೆ ಎಂದು ಸಂಸದರು ಹೇಳಿದರು.

    ಕೇರಳದಲ್ಲಿ ಅನುಸರಿಸಿರುವ ಮಾದರಿಯಂತೆ ಕೊಡಗಿನಲ್ಲಿ ಬಫರ್‌ ಜೋನ್‌ ಅನ್ನು ಶೂನ್ಯ ಕಿಲೋಮೀಟರ್‌ಗೆ ನಿಗದಿಪಡಿಸುವಂತೆ ಒತ್ತಾಯಿಸಲಾಗುವುದು. ಜನವಸತಿ ಪ್ರದೇಶಗಳು ಹಾಗೂ ಕೃಷಿ ಭೂಮಿಯನ್ನು ಅರಣ್ಯ ವ್ಯಾಪ್ತಿಗೆ ಸೇರಿಸಬಾರದು. ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಯದುವೀರ್ ಒಡೆಯರ್ ಮನವಿ ಮಾಡಿದರು.

    ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವುದು ಸಾಧ್ಯವಿಲ್ಲ. ಬದಲಾಗಿ ಸ್ಥಳಕ್ಕೆ ತೆರಳಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸುವ ಫಿಸಿಕಲ್ ವೆರಿಫಿಕೇಷನ್ ನಡೆಸಬೇಕು ಎಂಬ ಸಲಹೆಯನ್ನು ನೀಡಲಾಗಿದೆ. ಈ ಸಲಹೆಯನ್ನು ಕೇಂದ್ರ ಸರ್ಕಾರವೂ ಒಪ್ಪಿಕೊಂಡಿದೆ ಎಂದು ಅವರು ತಿಳಿಸಿದರು.

    ಕರ್ನಾಟಕದಲ್ಲಿಯೂ ಇದೇ ರೀತಿಯ ಫಿಸಿಕಲ್ ವೆರಿಫಿಕೇಷನ್ ನಡೆಸಿ, ನೈಜ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ವಿವಿಧ ಮುಖಂಡರು ಒತ್ತಾಯಿಸಿದರು.

    ಸಭೆ ಪಕ್ಷಾತೀತವಾಗಿ ನಡೆದಿದ್ದರೂ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಭಾಗವಹಿಸದಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದರು. ಕೊಡಗಿನ ಜನರ ಬದುಕು, ಕೃಷಿ ಹಾಗೂ ಪರಿಸರಕ್ಕೆ ನೇರವಾಗಿ ಸಂಬಂಧಿಸಿದ ಈ ಮಹತ್ವದ ವಿಚಾರದಲ್ಲಿ ಎಲ್ಲ ಪಕ್ಷಗಳ ಪ್ರತಿನಿಧಿಗಳು ಒಗ್ಗಟ್ಟಿನಿಂದ ಚರ್ಚೆ ನಡೆಸಬೇಕಿತ್ತು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

    ಸಂವಾದದಲ್ಲಿ ಶಾಸಕ ಸುಜಾ ಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಸುನಿಲ್ ಸುಬ್ರಹ್ಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.

    Previous Articleಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    Next Article ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    Related Posts

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026

    ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ

    August 27, 2026

    ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026

    ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್

    August 27, 2026

    ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.